Loading..!

KPSC ಯ Group-C ಹುದ್ದೆಗಳ ಲಿಖಿತ ಪರೀಕ್ಷೆಯ ದಿನಾಂಕ ಮುಂದೂಡಲಾಗಿದೆ..| ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:March 1, 2025
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ಪದವಿ ಪೂರ್ವ ವಿದ್ಯಾರ್ಹತೆ ಮಟ್ಟದ ಜಲ ಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ ಮತ್ತು ಸಹಾಯಕ ಗ್ರಂಥ ಪಾಲಕರ (ಉಳಿಕೆ ಮೂಲ ವೃಂದ) ಹುದ್ದೆಗಳ ನೇಮಕಾತಿಗಾಗಿ 15/03/2024 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ಗ್ರೂಪ್ ಸಿ ಹುದ್ದೆಗಳಿಗೆ ದಿ15-03-2025 ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ದಿ:16-03-2025 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. 


              ಆದರೆ ಇತ್ತೀಚಿಗೆ ನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೆ ಲಕ್ಷಾಂತರ ಅಭ್ಯರ್ಥಿಗಳು ಹಾಜರಾಗಿದ್ದು, ಅದರ ಫಲಿತಾಂಶವು ಶೀಘ್ರದಲ್ಲಿಯೇ ಪ್ರಕಟವಾಗಲಿದೆ. ಆ ಪರೀಕ್ಷೆಗಳಿಗೆ ಹಾಜರಾಗಿದ್ದ ಹಲವು ಅಭ್ಯರ್ಥಿಗಳು ಈ ಪರೀಕ್ಷೆಗಳಿಗೂ ಸಹ ಅಭ್ಯರ್ಥಿಗಳಾಗಿದ್ದು, ಅವರುಗಳು ಮತ್ತೊಮ್ಮೆ ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯುವುದರಿಂದ ಆಯೋಗಕ್ಕೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಹೆಚ್ಚಿನ ಹೊರೆಯಾಗುವುದಲ್ಲದೆ ಅಭ್ಯರ್ಥಿಗಳಿಗೂ ಸಹ ಹೊರೆಯಾಗಲಿದೆ. ಆದ್ದರಿಂದ ದಿ:15-03-2025 ರಂದು ನಿಗದಿಯಾಗಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮಾತ್ರ ಮುಂದೂಡಲಾಗಿದ್ದು, ದಿ:16-03-2025ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿಗದಿಪಡಿಸಿರುವಂತೆ ನಡೆಸಲಾಗುವುದು.


ಹುದ್ದೆಗಳ ವಿವರ : 
ಜಲ ಸಂಪನ್ಮೂಲ ಇಲಾಖೆ
- ಕಿರಿಯ ಇಂಜಿನಿಯರ್ (ಸಿವಿಲ್) : 216
- ಕಿರಿಯ ಇಂಜಿನಿಯರ್ (ಸಿವಿಲ್) : 54
( ಸೇವಾ ನಿರತ ಗ್ರೂಪ್ ಸಿ ಸಿಬ್ಬಂದಿಗಳಿಗೆ)
- ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) : 24
- ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) : 06 
(ಸೇವಾ ನಿರತ ಗ್ರೂಪ್ ಸಿ ಸಿಬ್ಬಂದಿಗಳಿಗೆ)
ಸಾರ್ವಜನಿಕ ಗ್ರಂಥಾಲಯ ಇಲಾಖೆ 
- ಸಹಾಯಕ ಗ್ರಂಥಪಾಲಕ-13
ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ : 16-03-2025
ಪತ್ರಿಕೆ -1 ಸಾಮಾನ್ಯ ಜ್ಞಾನ : 10:00 ರಿಂದ 11:30 
ಪತ್ರಿಕೆ-2 : ಮಧ್ಯಾಹ್ನ 2:00 ರಿಂದ 4:00 ರವರೆಗೆ


ಈ ಕುರಿತ ಅಧಿಕೃತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿರುತ್ತದೆ.

Comments