Loading..!

KPSCಯಿಂದ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:Feb. 28, 2025
Image not found

ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ಗೆಜೆಟೆಡ್ ಪ್ರೊಬೇಷನ‌ರ್ (KAS) ಗ್ರೂಪ್ - 'ಎ' ಮತ್ತು ಗ್ರೂಪ್- 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗಾಗಿ 26/02/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 


                 ಗೆಜೆಟೆಡ್ ಪ್ರೊಬೇಷನ‌ರ್ (KAS) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಪೂರ್ವಭಾವಿ ಪರೀಕ್ಷೆಯನ್ನು 29-ಡಿಸೆಂಬರ್ 2024ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ(KPSC)ವು ಮುಖ್ಯ ಪರೀಕ್ಷೆಗೆ (Mains Exam) ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇದೀಗ ಲಿಂಕ್ ಪ್ರಕಟಿಸಿದ್ದು, ಇದರೊಂದಿಗೆ ಅರ್ಜಿ ಸಲ್ಲಿಸಲು ಇದ್ದ ಅವಧಿಯನ್ನು 2025 ಫೆಬ್ರುವರಿ -27 ರಿಂದ ಮಾಚ್೯-13 ರ ವರೆಗೆ ವಿಸ್ತರಿಸಲಾಗಿದೆ.

Comments