Loading..!

KPSC ಯ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಮರುಪರೀಕ್ಷೆ ತಡೆಯಾಜ್ಞೆ ತೆರವು | ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:Dec. 18, 2024
Image not found

ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ಗೆಜೆಟೆಡ್ ಪ್ರೊಬೇಷನ‌ರ್ (KAS) ಗ್ರೂಪ್ - 'ಎ' ಮತ್ತು ಗ್ರೂಪ್- 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗಾಗಿ 26/02/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ಪೂರ್ವಭಾವಿ ಪರೀಕ್ಷೆಯನ್ನು 2024 ಆಗಸ್ಟ್ 27 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು ಆದರೆ ಪರೀಕ್ಷೆಯ ಪ್ರಶ್ನೆಪತ್ರಿಕೆಯನು ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡುವಲ್ಲಿ ದೊಡ್ಡ ಲೋಪಗಳು ಉಂಟಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸುವಂತೆ ಅಭ್ಯರ್ಥಿಗಳು ಆಯೋಗದ ಮೇಲೆ ಒತ್ತಡ ಹಾಕಿದರು.


     ಕೆಪಿಎಸ್‌ಸಿ, ಸರಕಾರ ಮತ್ತು ಅರ್ಜಿದಾರರ ಪರ ಸಮಗ್ರವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ನ್ಯಾಯಾಲಯ, ಮರು ಪರೀಕ್ಷೆಗೆ ಅಕ್ಟೋಬರ್.16ರಂದು ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ತೆರವುಗೊಳಿಸಿತು. 


            ಡಿಸೆಂಬರ್-29 ರಂದು KPSC ಮರುಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿತ್ತು, ಈ ಮದ್ಯೆ ಮರುಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ (Stay) ನೀಡಿತ್ತು. ಇದೀಗ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಅದರಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ಪೂರ್ವಭಾವಿ ಪರೀಕ್ಷೆಯನ್ನು 2024 ಡಿಸೆಂಬರ್.29 ರಂದು ನಡೆಸಲು ನಿಗದಿಪಡಿಸಲಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಭ್ಯರ್ಥಿಗಳು ದೃತಿಗೆಡದೆ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕು ಗೊಳಿಸಿ ಉತ್ತಮ ತಯಾರಿ ಮಾಡಿಕೊಳ್ಳಿ.


- ಈ ಕುರಿತ ಅಧಿಕೃತ ಮಾಹಿತಿ ಇನ್ನಷ್ಟೇ KPSC ಜಾಲತಾಣದಲ್ಲಿ ಪ್ರಕಟಗೊಳ್ಳಲಿದೆ ನಿರೀಕ್ಷಿಸಿ...

Comments