ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-'ಎ' ಮತ್ತು ಗ್ರೂಪ್-'ಬಿ' ಹುದ್ದೆಗಳ ನೇಮಕಾತಿಗಾಗಿ 2024ರ ಡಿಸೆಂಬರ್ 29ರಂದು ನಡೆಸಿದ ಪೂರ್ವಭಾವಿ ಮರುಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.
ಪೂರ್ವಭಾವಿ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ 1:15 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ. ಈ ಪಟ್ಟಿಯನ್ನು ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ (www.kpsc.kar.nic.in) ಪರಿಶೀಲಿಸಬಹುದು.
ಈಗಾಗಲೇ ಪ್ರಕಟಿಸಿದ ಮಾಹಿತಿಯಂತೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಪೈಕಿ 5,760 ಮಂದಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಮುಖ್ಯ ಪರೀಕ್ಷೆಯ ಸಂಭಾವ್ಯ ವೇಳಾಪಟ್ಟಿಯ ಪ್ರಕಾರ ಗೆಜೆಟೆಡ್ ಪ್ರೊಬೇಷನರ್ (ಗ್ರೂಪ್-'ಎ', ಗ್ರೂಪ್-'ಬಿ') ಹುದ್ದೆಗಳ ಮುಖ್ಯ ಪರೀಕ್ಷೆಗಳನ್ನು 2025ರ ಮಾರ್ಚ್ 28, 29 ಮತ್ತು ಏಪ್ರಿಲ್ 1, 2ರಂದು ನಡೆಸಲಾಗುವುದು. ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆಗಳನ್ನು ಪರಿಶೀಲಿಸಿ, ವಿವರವಾದ ಅರ್ಜಿಯನ್ನು ಸಲ್ಲಿಸಬೇಕು.
ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮುಂದಿನ ಹಂತದ ಮಾರ್ಗಸೂಚಿಗಳನ್ನು ಪಾಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
Comments