Loading..!

KPSCಯಲ್ಲಿ ಖಾಲಿ ಇರುವ ಗ್ರೂಪ್-ಬಿ ಹುದ್ದೆಗಳ ಅರ್ಜಿ ಸಲ್ಲಿಸುವ ಅವಧಿ ಮುಂದೂಡಲಾಗಿದೆ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:Oct. 9, 2024
Image not found

  ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 945 (ಹೈದ್ರಾಬಾದ್-ಕರ್ನಾಟಕ ವೃಂದ 273 ಮತ್ತು ಉಳಿಕೆ ಮೂಲ ವೃಂದ - 672) ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ 20/09/2024 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕವನ್ನು 07/10/2024 ಎಂದು ನಿಗದಿಪಡಿಸಲಾಗಿತ್ತು 


  ಈ ಅಧಿಸೂಚನೆಯಲ್ಲಿ ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು 2024 ಅನ್ನು ರಚಿಸಿದ್ದು, ಅದರಲ್ಲಿ ಕರ್ನಾಟಕ ನಾಗರೀಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳು 1977ರಲ್ಲಿನ ನಿಯಮ 9ಕ್ಕೆ ಮಾಡಿರುವ ತಿದ್ದುಪಡಿಯಲ್ಲಿ ಗ್ರೂಪ್-ಎ, ಬಿ, ಸಿ ಮತ್ತು ಡಿ ವೃಂದದಡಿ ಮಾಡುವ ನೇರ ನೇಮಕಾತಿ ಹುದ್ದೆಗಳಲ್ಲಿ ಕ್ರೀಡಾ ಸಾಧಕ ಅಭ್ಯರ್ಥಿಗಳಿಗೆ ಶೇಕಡ 2ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಆದೇಶಿಸಿರುತ್ತದೆ.


  ಈ ಆದೇಶದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೂ ಕ್ರೀಡಾ ಮೀಸಲಾತಿಯನ್ನು ಅಳವಡಿಸಿಕೊಳ್ಳಬೇಕಾಗಿರುವುದರಿಂದ ದಿನಾಂಕ:07-10-2024ರಿಂದ ಪ್ರಾರಂಭಿಸಬೇಕಿದ್ದ ಅರ್ಜಿ ಸ್ವೀಕಾರ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.


- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. 

Comments