ಕೇಂದ್ರ ಲೋಕ ಸೇವಾ ಆಯೋಗ (UPSC) ದಿಂದ ಭಾರತೀಯ ಅರಣ್ಯ ಸೇವೆ (Indian Forest Service (IFS)) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನಂತರದ ಹಂತವಾದ ಪ್ರಿಲಿಮಿನರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ UPSCಯು ಮುಖ್ಯ ಪರೀಕ್ಷೆ (Main Examination) ಯನ್ನು ದಿನಾಂಕ 2024 ನವೆಂಬರ್-24 ರಿಂದ ನಡೆಸಲಿದ್ದು ಪರೀಕ್ಷೆಯ ಪ್ರವೇಶ ಪತ್ರವನ್ನು ಇದೀಗ ಬಿಡುಗಡೆ ಮಾಡಿದೆ.
ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು, ಪ್ರಮುಖ ಪರೀಕ್ಷೆಯು ಇದೇ ನವೆಂಬರ್ 24 ರಿಂದ ನಡೆಯಲಿದೆ. ಅಭ್ಯರ್ಥಿಗಳಿಗೆ ಡಿಸೆಂಬರ್ 1, 2024ರ ವರೆಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಮುಖ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪ್ರಮುಖ ಪರೀಕ್ಷೆ ಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮುಂದಿನ ಹಂತವಾಗಿ ಸಂದರ್ಶನ ಇರಲಿದ್ದು, ಸಂದರ್ಶನದ ವೇಳಾಪಟ್ಟಿಯನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
- ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
Comments