Loading..!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಗಲಕೋಟೆ ಇಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:Jan. 30, 2019
not found
ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಾಗಲಕೋಟ ಜಿಲ್ಲೆಯ 6 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೇಮಕಾತಿಯ ಆಯ್ಕೆಯ ಮಾರ್ಗಸೂಚಿಗಳನ್ನು ಈ ಕೆಳಗಡೆ ನೀಡಲಾಗಿದೆ.

ಅರ್ಹತೆಗಳು:
-> ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 - 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು.
->ಈ ಹುದ್ದೆಗಳಿಗೆ ಆನ್ಲೈನ್ ಮೂಲಕವೇ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು ಅರ್ಜಿಗಳನ್ನು ಇತರೆ ಯಾವುದೇ ಮೂಲದಿಂದ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಅವುಗಳನ್ನು ಪರಿಗಣಿಸಲಾಗುವುದಿಲ್ಲ
->ಆನ್ಲೈನ್ ಅರ್ಜಿಯೊಂದಿಗೆ ಈ ದಾಖಲೆಗಳನ್ನು ಲಗತ್ತಿಸಬೇಕು ಅರ್ಜಿ ನಿಗದಿತ ನಮೂನೆಯಲ್ಲಿ(online), ಜನನ ಪ್ರಮಾಣಪತ್ರ, ವಿದ್ಯಾರ್ಹತೆಯ ಅಂಕಪಟ್ಟಿ, ವಾಸಸ್ಥಳದ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ಹಾಗೂ ಇತರ ಅವಶ್ಯ ದಾಖಲಾತಿಗಳನ್ನು ಲಗತ್ತಿಸಬೇಕು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments