Loading..!

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಬಾಗಲಕೋಟ ಇದರಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
| Date:June 14, 2019
not found
ಬಾಗಲಕೋಟೆ ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತ ಖಾಲಿ ಇರುವ 44 ದ್ವಿತೀಯ ದರ್ಜೆ ಸಹಾಯಕರ ನೇಮಕಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಿದ್ದು, ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. 2018ರ ಡಿಸೆಂಬರ್ 11 ರಂದು 80 ವಿವಿಧ ಹುದ್ದೆಗಳ ನೇಮಕಕ್ಕೆ ಬ್ಯಾಂಕ್ ಅಧಿಸೂಚನೆ ಹೊರಡಿಸಿತ್ತು.
ಇದರಲ್ಲಿ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಬಿಎಸ್ಸಿ,ಬಿಸಿಎ,ಬಿಕಾಂ,ಬಿಬಿಎ,ಬಿಬಿಎಂ ಅಥವಾ ಬಿಎಸ್ಸಿ(ಕೃಷಿ) ವಿದ್ಯಾರ್ಹತೆ ನಿಗದಿಪಡಿಸಿತ್ತು. ನಿಗದಿತ ವಿದ್ಯಾರ್ಹತೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿರುವುದರಿಂದ ಇದೀಗ ಬಿಎ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗು ಅರ್ಜಿ ಸಲ್ಲಿಸಲು ಅವಕಾಶ ನೀಡಿ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ.
ಈಗ ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನವಾಗಿರುತ್ತದೆ. ಈ ಹಿಂದಿನ ಅಧಿಸೂಚನೆಗನುಗುಣವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿಸಲ್ಲಿಸುವ ಅಗತ್ಯವಿರುವುದಿಲ್ಲ. ಬಿಎ(BA) ಪದವಿ ಹೊರತುಪಡಿಸಿ ಇನ್ಯಾವುದೇ ಪದವಿಯನ್ನು ವಿದ್ಯಾರ್ಹತೆಯನ್ನಾಗಿ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವದಿಲ್ಲ ಎಂದು ಪ್ರಕಟಣೆಯಲ್ಲಿ ಬ್ಯಾಂಕ್ ಸ್ಪಷ್ಟಪಡಿಸಿದೆ.

ಅರ್ಜಿ ಸಲ್ಲಿಸುವ ವಿಧಾನ:
1) ಬ್ಯಾಂಕಿನಿಂದ ಪೊರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅಗತ್ಯ ಅರ್ಜಿ ಸಲ್ಲಿಸತಕ್ಕದ್ದು ಅಥವಾ ವೆಬ್‍ಸೈಟ ಮುಖಾಂತರ ಪಡೆದ ಅರ್ಜಿಗೆ ಡಿಡಿ ಲಗತ್ತಿಸಿ ಸಲ್ಲಿಸತಕ್ಕದ್ದು.
2) ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂಬುವದನ್ನು ಲಕೋಟೆಯ ಮೇಲೆ ಸ್ಪಷ್ಟವಾಗಿ ನಮೂದಿಸಬೇಕು.
3) ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ :
ಸದಸ್ಯ ಕಾರ್ಯದರ್ಶಿ,
ಸಿಬ್ಬಂದಿ ನೇಮಕಾತಿ ಸಮೀತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ನಿ.,
ಸೆಕ್ಟರ ನಂ: 24 ನವನಗರ ಬಾಗಕೋಟ-587103

4) ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24-06-2019 ರ ಸಾಯಂಕಾಲ 5.00 ಘಂಟೆವರೆಗೆ ಮಾತ್ರ ಇರುತ್ತದೆ.

* ಈ ಕುರಿತು ಏನಾದರು ಗೊಂದಲಗಳಿಂದಲ್ಲಿ ನೇರವಾಗಿ ಬ್ಯಾಂಕಿನೊಂದಿಗೆ ವ್ಯವಹರಿಸಿ.
No. of posts:  44
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments