ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 1267 ಅಗ್ರಿಕಲ್ಚರ್ ಮಾರ್ಕೆಟಿಂಗ್ ಆಫೀಸರ್, ಅಗ್ರಿಕಲ್ಚರ್ ಮಾರ್ಕೆಟಿಂಗ್ ಮ್ಯಾನೇಜರ್, ರಿಟೇಲ್ ಲಿಎಬಿಲಿಟಿಸ್, ಫೆಸಿಲಿಟಿ ಮ್ಯಾನೇಜ್ಮೆಂಟ್, ಫೈನಾನ್ಸ್, ಮ್ಯಾನೇಜರ್ ಸೇಲ್ಸ್, ಮತ್ತು ಟೆಕ್ನಿಕಲ್ ಮ್ಯಾನೇಜರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 1267 ಮ್ಯಾನೇಜರ್, ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 17/01/2025 ರ ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 27/01/2025 ವರೆಗೆ ವಿಸ್ತರಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Comments