ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 4000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 4000 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ 537 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 19, 2025 ರಿಂದ ಮಾರ್ಚ್ 11, 2025 ರವರೆಗೆ ಅಧಿಕೃತ ವೆಬ್‌ಸೈಟ್ (bankofbaroda.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 4000
Andhra Pradesh : 59
Assam : 40
Bihar : 120
Chandigarh (UT) : 40
Chhattisgarh : 76
Dadra and Nagar Haveli : 7
Delhi : 172
Goa : 10
Gujart : 573
Haryana : 71
Jammu and Kashmir : 11
Jharkhand : 30
Karnataka : 537
Kerala : 89
Madhya Pradesh : 94
Maharashtra : 388
Manipur : 8
Mizoram : 6
Odisha : 50
Puducherry (UT) : 10
Punjab : 132
Rajasthan : 320
Tamil Nadu : 223
Telangana : 193
Uttar Pradesh : 558
Uttarakhand : 30
West Bengal : 153
ಅರ್ಹತಾ ಮಾನದಂಡಗಳು :
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: 2025 ಫೆಬ್ರವರಿ 1 ರಂದು ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಇರಬೇಕು
ವಯೋಮಿತಿ ಸಡಿಲಿಕೆ :
OBC Candidates: 3 Years
SC/ ST Candidates: 5 Years
PWBD (General) Candidates: 10 Years
PWBD (OBC) Candidates: 13 Years
PWBD (SC/ST) Candidates: 15 Years
ಅಪ್ಲಿಕೇಶನ್ ಶುಲ್ಕ :
ಸಾಮಾನ್ಯ, OBC, EWS ಅಭ್ಯರ್ಥಿಗಳು: ₹800/-
SC, ST ಅಭ್ಯರ್ಥಿಗಳು: ₹600/-
PWBD ಅಭ್ಯರ್ಥಿಗಳು: ₹400/-
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ :
ಆನ್‌ಲೈನ್ ಪರೀಕ್ಷೆ
ದಾಖಲೆ ಪರಿಶೀಲನೆ
ರಾಜ್ಯದ ಸ್ಥಳೀಯ ಭಾಷಾ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ :
- BOB ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.
- ಆನ್‌ಲೈನ್ ಅರ್ಜಿ ಭರ್ತಿಗೆ ಮೊದಲು, ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ.
- BOB ಅಧಿಕೃತ ವೆಬ್‌ಸೈಟ್ (bankofbaroda.in) ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗಾಗಿ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿರುವ ಎಲ್ಲಾ ವಿವರಗಳನ್ನು ಅರ್ಜಿಯಲ್ಲಿ ನಮೂದಿಸಿ, ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಅನುಗುಣವಾಗಿ ಅಪ್ಲಿಕೇಶನ್ ಶುಲ್ಕವನ್ನು ಪಾವತಿಸಿ.
- ಅಂತಿಮವಾಗಿ, ಅರ್ಜಿಯನ್ನು ಸಲ್ಲಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆಯನ್ನು ಸಂಗ್ರಹಿಸಿ.
ಮುಖ್ಯ ದಿನಾಂಕಗಳು :
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಫೆಬ್ರವರಿ 19, 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 11, 2025
ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಗಾಗಿ, ದಯವಿಟ್ಟು BOB ಅಧಿಕೃತ ವೆಬ್‌ಸೈಟ್ (bankofbaroda.in) ಗೆ ಭೇಟಿ ನೀಡಿ.
Comments