ಕೊಪ್ಪಳ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:March 9, 2024
ಕೊಪ್ಪಳ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳ 21 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದವರ ಪೈಕಿ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಗಳು ಲಭ್ಯವಾಗದಿದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯ ಇತರ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 03/04/2024 ರ ಸಂಜೆ 05:30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್,
ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್, ಕೊಪ್ಪಳ.
No. of posts: 21
Comments