Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್-ಬಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:May 24, 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಲ ಸಂಪನ್ಮೂಲ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಅಂತರ್ಜಲ ನಿರ್ದೇಶನಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ327 ಗ್ರೂಪ್ ಬಿ ಉಳಿಕೆ ಮೂಲ ವೃಂದದ  ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ ಸಹಾಯಕ ಇಂಜಿನಿಯರ್, ಸಹಾಯಕ ನಿರ್ದೇಶಕರು, ಭೂ ವಿಜ್ಞಾನಿ ಮತ್ತು ಕಾರ್ಖಾನೆಗಳ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 15/04/2024 ರಿಂದ ಆರಂಭಗೊಂಡು ದಿನಾಂಕ 14/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಹುದ್ದೆಗಳ ವಿವರ : 327
ಉಳಿಕೆ ಮೂಲ ವೃಂದ : 277
ಹೈ ಕರ್ನಾಟಕ ವೃಂದ : 50 

KPSC ಯಿಂದ ಹೊರಡಿಸಲಾಗಿದ್ದ ವಿವಿಧ ಇಲಾಖೆಗಳ 327 Group-B ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 14/05/2024 ವರೆಗೆ ನಿಗದಿಪಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 24-05-2024 ರ ವರೆಗೆ ವಿಸ್ತರಿಸಲಾಗಿದೆ.

No. of posts:  327

Comments