Loading..!

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ / ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಅಹ್ವಾನ.
| Date:July 8, 2019
not found
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಯು.ಜಿ.ಸಿ (UGC) ನಿಯಮಗಳ ಪ್ರಕಾರ ಅರ್ಹತೆಯನ್ನು ಹೊಂದಿದ ಅಭ್ಯರ್ಥಿಗಳಿಂದ, ಕರ್ನಾಟಕ ವಿಶ್ವವಿದ್ಯಾಲಯದ ಕರ್ನಾಟಕ ಕಲಾ ಮಹಾವಿದ್ಯಾಲಯ / ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ / ಬಿಬಿಎ / ಬಿಸಿಎ / ಕಾನೂನು / ಸಂಗೀತ / ಶಿಕ್ಷಣ ಮಹಾವಿದ್ಯಾಲಯದಲ್ಲಿ (ಯು.ಜಿ) ಸನ್ 2019 - 20 ನೇ ಸಾಲಿನ ಎಲ್ಲ ತರಗತಿಗಳಿಗೆ ಅಗತ್ಯತೆಗನುಸಾರವಾಗಿ ಅತಿಥಿ ಉಪನ್ಯಾಸಕ / ಸಹಾಯಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. (ಯು.ಜಿ.ಸಿ ನೆಟ್ / ಸ್ಲೇಟ್ ಉತ್ತೀರ್ಣತೆ / ಪಿಎಚ್ ಡಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ). ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ಪ್ರಾಚಾರ್ಯರು ಕ.ವಿ.ವಿ. ಅಧೀನ ಮಹಾವಿದ್ಯಾಲಯಗಳಿಂದ ಖುದ್ದಾಗಿ ಅಥವಾ ಈ ಕೆಳಗೆ ನೀಡಿರುವ ಲಿಂಕ್ ಮುಖಾಂತರ ಪಡೆಯಬಹುದು.

ವಿಶೇಷ ಸೂಚನೆ: ಕರ್ನಾಟಕ ವಿಶ್ವವಿದ್ಯಾಲಯದ ಅಧೀನ ಮಹಾವಿದ್ಯಾಲಯಗಳು / ಸ್ನಾತಕೋತ್ತರ ವಿಭಾಗಗಳ / ಸ್ನಾತಕೋತ್ತರ ಕೇಂದ್ರಗಳಲ್ಲಿ ಮೂರು ಅಥವಾ ಮೂರಕ್ಕಿಂತ ಹೆಚ್ಚಿನ ವರ್ಷಗಳ ಸೇವಾ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಸಮಾಲೋಚನೆ / ಸಂದರ್ಶನಕ್ಕೆ ವಿನಾಯಿತಿ ನೀಡಲಾಗಿರುತ್ತದೆ ಹಾಗೂ ಸದರಿ ಅಭ್ಯರ್ಥಿಗಳು ಸೇವಾ ಪ್ರಮಾಣ ಪತ್ರದ ಜೊತೆಗೆ ಸಂಬಂಧಿಸಿದ ಪ್ರಾಚಾರ್ಯರು / ಅಧ್ಯಕ್ಷರು / ಆಡಳಿತಾಅಧಿಕಾರಿಗಳಿಂದ ಪಡೆದ ನಡುವಳಿಕೆ ಪ್ರಮಾಣ ಪತ್ರದ ಮೂಲ ಪ್ರತಿಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸುವುದು ( ಶೈಕ್ಷಣಿಕ ಸಾಲಿಗೆ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದ ನಡುವಳಿಕೆ ಪ್ರಮಾಣ ಪತ್ರಗಳನ್ನು ಮಾತ್ರ ಪರಿಗಣಿಸಲಾಗುವುದು)

ಈ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಮತ್ತು ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
No. of posts:  90
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments