Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 88 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ
| Date:Oct. 11, 2019
not found
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಇಲಾಖೆಯು ಗ್ರಾಮೀಣ ಪ್ರದೇಶಗಳ ಜಲಮೂಲಗಳ ಗುಣಮಟ್ಟವನ್ನು ಪರೀಕ್ಷಿಸುವ ಸಲುವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಈ ಪ್ರಯೋಗಾಲಯಗಳಲ್ಲಿ ಕಾರ್ಯ ನಿರ್ವಹಿಸಲು ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು 88 ರಾಸಾಯನಿಕ ತಜ್ಞರು (ಕೆಮಿಸ್ಟ್), ಜಿಲ್ಲಾ ಪ್ರಯೋಗಾಲಯ ಸಹಾಯಕರು ಹಾಗೂ ಡೇಟಾ ಎಂಟ್ರಿ ಆಪರೇಟರ್ ಮತ್ತು ಜಿಲ್ಲಾ ಪ್ರಯೋಗಾಲಯ ಪರಿಚಾರಕರು ಹಾಗೂ ನೀರಿನ ಮಾದರಿ ಸಂಗ್ರಹಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 88 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ದಿನಾಂಕ ಅ.16 ಕೊನೆಯ ದಿನವಾಗಿರುತ್ತದೆ.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಭ್ಯರ್ಥಿಗಳು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಗುರುತಿನ ಚೀಟಿ ಮತ್ತು ಇತರೆ ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಅರ್ಜಿಯನ್ನು ರಿಜಿಸ್ಟರ್ಡ್‌ ಪೋಸ್ಟ್/ಸ್ಪೀಡ್ ಪೋಸ್ಟ್/ ಕೋರಿಯರ್ ಮೂಲಕ ಕಚೇರಿಯ ವಿಳಾಸಕ್ಕೆ ಅಕ್ಟೋಬರ್ 16,2019 ರೊಳಗೆ ತಲುಪುವಂತೆ ಕಳುಹಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:
ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
2ನೇ ಮಹಡಿ, 'ಇ' ಬ್ಲಾಕ್,
ಕೆ.ಹೆಚ್‌.ಬಿ ಕಾಂಪ್ಲೆಕ್ಸ್,
ಕಾವೇರಿ ಭವನ,
ಬೆಂಗಳೂರು-560009

ಖಾಲಿ ಹುದ್ದೆಗಳ ವಿವರ:
* ರಾಸಾಯನಿಕ ತಜ್ಞರು (ಜಿಲ್ಲಾ ಪ್ರಯೋಗಾಲಯಗಳಲ್ಲಿ)- 7 ಹುದ್ದೆಗಳು
* ರಾಸಾಯನಿಕ ತಜ್ಞರು(ತಾಲ್ಲೂಕು ಪ್ರಯೋಗಾಲಯಗಳಲ್ಲಿ)- 20 ಹುದ್ದೆಗಳು
* ಜಿಲ್ಲಾ ಪ್ರಯೋಗಾಲಯ ಸಹಾಯಕರು ಹಾಗೂ ಡೇಟಾ ಎಂಟ್ರಿ ಆಪರೇಟರ್ - 10 ಹುದ್ದೆಗಳು
* ಜಿಲ್ಲಾ ಪ್ರಯೋಗಾಲಯ ಪರಿಚಾರಕರು ಹಾಗೂ ನೀರಿನ ಮಾದರಿ ಸಂಗ್ರಹಗಾರರು- 51 ಹುದ್ದೆಗಳು
No. of posts:  88
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments