ಶಿವಮೊಗ್ಗ ಜಿಲ್ಲೆಯ ರೈಲ್ವೆ ಸಂಪರ್ಕ ಕೇಂದ್ರದಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ 2024-25ನೇ ಸಾಲಿನ ಆತ್ಮ ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನ ದೇವಂಗಿ ರೈತ ಸಂಪರ್ಕ ಕೇಂದ್ರದಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗಾಗಿ ಅಧಿಸೂಚಿನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
• ಹುದ್ದೆಯ ಹೆಸರು : ಸಹಾಯಕ ತಾಂತ್ರಿಕ ವ್ಯವಸ್ಥಾಪಕ
• ವಿದ್ಯಾರ್ಹತೆ : ಕೃಷಿ ಅಥವಾ ಕೃಷಿ ಸಂಬಂಧಿತ ಪದವಿ ಪಡೆದಿರಬೇಕು.
• ವಯೋಮಿತಿ : 45 ವರ್ಷ
• ನೇಮಕಾತಿ : 1 ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ
• ಅರ್ಜಿಯ ಪ್ರಕ್ರಿಯೆ : ನಿಗದಿತ ನಮೂನೆಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಫೆ.15ರೊಳಗೆ ಯೋಜನಾ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಅಗತ್ಯ ದಾಖಲೆಗಳು:
• ಪದವಿ ಪ್ರಮಾಣಪತ್ರ
• ಅಂತಿಮ ಅಂಕಪಟ್ಟಿ
• ಆಧಾರ್ ಕಾರ್ಡ್
• ಜಾತಿ ಪ್ರಮಾಣಪತ್ರ
• ಸೇವಾ ಅನುಭವ ಪ್ರಮಾಣಪತ್ರ
ಹೆಚ್ಚಿನ ವಿವಾರಗಳಿಗಾಗಿ ಯೋಜನಾ ನಿರ್ದೇಶಕರ ಕಚೇರಿ, ಶಿವಮೊಗ್ಗಕ್ಕೆ ಭೇಟಿ ನೀಡಿ
Comments