Loading..!

ಭಾರತೀಯ ವಾಯುಸೇನೆಯು ನೇಮಕಾತಿ ರ್ಯಾಲಿ ಶಿವಮೊಗ್ಗದಲ್ಲಿ ಏರ್ಪಡಿಸಿದ್ದು ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
| Date:July 22, 2019
not found
ಭಾರತೀಯ ವಾಯುಸೇನೆಯು ಜುಲೈ 17 ರಿಂದ 22 ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ವಾಯುಸೇನೆ ನೇಮಕಾತಿ ರ್ಯಾಲಿಯನ್ನು ಏರ್ಪಡಿಸಿದ್ದು, ರಾಜ್ಯದ ಪುರುಷ ವಿದ್ಯಾರ್ಥಿಗಳು ಆಯಾ ಜಿಲ್ಲೆಗೆ ನಿಗದಿಪಡಿಸಿದ ದಿನಾಂಕದಂದು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಕೆ.ಎ.ದಯಾನಂದ್ ಅವರು ತಿಳಿಸಿದ್ದಾರೆ.

ಜಿಲ್ಲಾವಾರು ನೇಮಕಾತಿ ನಡೆಯುವ ದಿನಾಂಕಗಳು :
* ಜುಲೈ 17 ಮತ್ತು 18 ರಂದು : ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳು
* ಜುಲೈ 21 ಮತ್ತು 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ,ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣ ಕನ್ನಡ( ಮಂಗಳೂರು), ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು,ಹಾಸನ,ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು
* ಜುಲೈ 19 ಮತ್ತು 20 ರಂದು ರಾಜ್ಯದ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ
* ಈ ಮೇಲೆ ತಿಳಿಸಿದಂತೆ ಆಯಾ ಜಿಲ್ಲೆಗಳ ಅಭ್ಯರ್ಥಿಗಳು ದೇಹದಾರ್ಢ್ಯ ಮತ್ತು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments