2022-23ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

2022-23ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
Published by Savita Halli
04 ಫೆಬ್ರವರಿ 2022 Others

ಪ್ರಸ್ತುತ (2022-23ನೇ ಸಾಲಿನಲ್ಲಿ) 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ತಾಲೂಕಿನ ಅರ್ಹ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಆನ್‌ಲೈನ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 24/1/2022 ರಿಂದ 9/2/2022ರವರೆಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ತಮ್ಮ ಪಾಲಕರು/ಪೋಷಕರು ಕೆಳಗೆ ನಮೂದಿಸಿರುವ ದಾಖಲಾತಿಯೊಂದಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
* ಎಸ್.ಟಿ.ಎಸ್.ನಂಬರ್ (SATS Number)
* ಮಗುವಿನ ಭಾವಚಿತ್ರ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು
* ಆಧಾರ್ ಕಾರ್ಡ್

2022-23ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: ಶೀಘ್ರದಲ್ಲಿ ಪ್ರಕಟಿಸಲಾಗುವುದು ಪ್ರವೆಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆಯುವ ದಿನಾಂಕ: ಶೀಘ್ರದಲ್ಲಿ ಪ್ರಕಟಿಸಲಾಗುವುದು.
ಅರ್ಜಿ ಸಲ್ಲಿಸುವ ದಿನಾಂಕ: ದಿನಾಂಕ: 24/1/2022 ರಿಂದ 9/2/2022ರವರೆಗೆ ಪ್ರವೇಶ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮಕ್ಕಳು ಯಾವುದೇ ಶುಲ್ಕ ಪಾವತಿಸಬೇಕಾಗಿರುವುದಿಲ್ಲ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ http://www.schooleducation.kar.nic.in/ ಗೆ ಭೇಟಿ ನೀಡಿ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.