ಬ್ಯಾಂಕ್ ಆಫ್ ಬರೋಡಾ ವೃತ್ತಿಪರರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28/08/2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಬ್ಯಾಂಕ್ ಆಫ್ ಬರೋಡಾದಲ್ಲಿನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 18/08/2025 ರಿಂದ 28/08/2025 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿರುತ್ತದೆ.
ಅರ್ಹತೆ : ಕಂಪ್ಯೂಟರ್ ವಿಜ್ಞಾನ ಅಥವಾ ಮಾಹಿತಿ ತಂತ್ರಜ್ಞಾನದಲ್ಲಿ ಬಿಇ/ ಬಿ.ಟೆಕ್. ಕಂಪ್ಯೂಟರ್ ವಿಜ್ಞಾನ, ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ, ಯಂತ್ರ ಕಲಿಕೆ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ವಿಜ್ಞಾನ / ಮಾಹಿತಿ ತಂತ್ರಜ್ಞಾನ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನದಲ್ಲಿ ಬಿಇ/ ಬಿ.ಟೆಕ್.
ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2025 ವಯಸ್ಸಿನ ಮಿತಿ :
ಕನಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 48 ವರ್ಷಗಳು
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆಗೆ ಅವಕಾಶವಿದೆ.
ಅರ್ಜಿ ಶುಲ್ಕ :
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ರೂ.850/- (ಜಿಎಸ್‌ಟಿ ಸೇರಿದಂತೆ) + ಪಾವತಿ ಗೇಟ್‌ವೇ ಶುಲ್ಕಗಳು
SC, ST, PWD, ESM (ಮಾಜಿ ಸೈನಿಕರು) ಮತ್ತು ಮಹಿಳೆಯರಿಗೆ: ರೂ.175/- (GST ಸೇರಿದಂತೆ) + ಪಾವತಿ ಗೇಟ್‌ವೇ ಶುಲ್ಕಗಳು
ಪ್ರಮಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-07-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-08-2025