ಬ್ಯಾಂಕ್ ಆಫ್ ಬರೋಡಾದಿಂದ ವಿವಿಧ ಹುದ್ದೆಗಳ ನೇಮಕಾತಿ ಕೈಗೊಳ್ಳಲಾದ ಅಧಿಸೂಚನೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ
20 ಆಗಸ್ಟ್ 2019
Others
ಕಳೆದ ವರ್ಷದ ಡಿಸೆಂಬರ್ ತಿಂಗಳ 04 ತಾರೀಕಿನಂದು ಬ್ಯಾಂಕ್ ಆಫ್ ಬರೋಡಾವು ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಪ್ರಕಟಿಸಿತ್ತು ಹಾಗೂ ವಿವಿಧ ಹಂತಗಳಲ್ಲಿ ನೇಮಕ ಪ್ರಕ್ರಿಯೆಯನ್ನು ಕೈಗೊಂಡು ಅಂತಿಮವಾಗಿ ಸಂದರ್ಶನ ನಡೆಸಿ ಈ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಈಗ ಬ್ಯಾಂಕ್ ಆಫ್ ಬರೋಡಾವು ಪ್ರಕಟಿಸಿದೆ.
ಈ ಹುದ್ದೆಗಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಅರ್ಹತಾ ಪರೀಕ್ಷೆ ಹಾಗೂ ಮೇ ತಿಂಗಳಿನಲ್ಲಿ ಸಂದರ್ಶನಗಳನ್ನು ಕೈಗೊಂಡು ಪ್ರಸ್ತುತ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಬ್ಯಾಂಕ್ ಆಫ್ ಬರೋಡಾವು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ