* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವರಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
* ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ.
- ಪ್ರವರ್ಗ-1, ಎಸ್.ಸಿ & ಎಸ್.ಟಿ : ರೂ.2.50 ಲಕ್ಷ
- ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ : ರೂ.1.00ಲಕ್ಷ
* online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.02.2021
* ಆನ್ ಲೈನ್ ನಲ್ಲಿ ಕಡ್ಡಾಯವಾಗಿ ಅಪ್ ಲೋಡ್ ಮಾಡಬೇಕಾದ ದಾಖಲಾತಿಗಳು
1. ತಹಸೀಲ್ದಾರ್/ಉಪ ತಹಸೀಲ್ದಾರ್ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ವಿದ್ಯಾಭ್ಯಾಸಕ್ಕಾಗಿ ಪಡೆದಿದ್ದು).
2. ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ನೀಡಲಾದ ವರ್ಗಾವಣೆ ಪ್ರಮಾಣ ಪತ್ರ.
3. ಆಧಾರ್ ಕಾರ್ಡ್ ಅಥವಾ ಇ.ಐಡಿ. ನಂಬರ್ ಪ್ರತಿ.
4. SSLC ಅಂಕಪಟ್ಟಿ ಹಾಗೂ ಹಿಂದಿನ ತರಗತಿ/ಕೋರ್ಸ್'ಗಳ ಅಂಕಪಟ್ಟಿ.
5. ಬ್ಯಾಂಕ್ ಪಾಸ್ ಬುಕ್ ಮೊದಲ ಪುಟ.
6. ವಿದ್ಯಾರ್ಥಿ ವಿಕಲಚೇತನ/ಅಂಧ ವಿದ್ಯಾರ್ಥಿಗಳಾಗಿದ್ದಲ್ಲಿ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಪಡೆದ ಪ್ರಮಾಣ ಪತ್ರ.
7. ವಿದ್ಯಾರ್ಥಿ ಭಾವಚಿತ್ರ.
8. ಗ್ರಾಮ ಪಂಚಾಯಿತಿ/ಸ್ಥಳೀಯ ಸಂಸ್ಥೆಗಳಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ.
- ಈ ಪ್ರವೇಶಾತಿಗಳ ಕುರಿತ ಹೆಚ್ಚಿನ ವಿವರಗಳಿಗಾಗಿ ಪಾಲಕರು / ವಿದ್ಯಾರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಪಡೆಯಬಹುದು.
Comments