ಕರ್ನಾಟಕ ರಾಜ್ಯ ಸರ್ಕಾರದಿಂದ ಬೆಳಗಾವಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ

ಕರ್ನಾಟಕ ರಾಜ್ಯ ಸರ್ಕಾರದಿಂದ ಬೆಳಗಾವಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ
Published by Basavaraj Halli
26 ಫೆಬ್ರವರಿ 2020 Others
ಜಿಲ್ಲಾಡಳಿತ ಬೆಳಗಾವಿ, ಧಾರವಾಡ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ಬೆಳಗಾವಿಯ ಎಸ್ ಜಿ ಬಾಳೇಕುಂದ್ರಿ ಇನ್ಸ್ಟೂಟ್ ಆಫ್ ಟೆಕ್ನಾಲಜಿ ಕಾಲೇಜು ಕ್ಯಾಂಪಸ್, ಶಿವಬಸವನಗರ. ಬೆಳಗಾವಿ ಇಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. * ಉದ್ಯೋಗ ಮೇಳವನ್ನು ದಿನಾಂಕ 28, 29 ಫೆಬ್ರುವರಿ 2020 (ಶುಕ್ರವಾರ & ಶನಿವಾರ) ರಂದು ನಡೆಸಲಾಗುತ್ತಿದೆ. * ಈ ಉದ್ಯೋಗ ಮೇಳದಲ್ಲಿ ಐಟಿ-ಬಿಟಿ, ಆಟೋಮೊಬೈಲ್, ಮೆಕ್ಯಾನಿಕಲ್, ಮಾರ್ಕೆಟಿಂಗ್, ಸೇಲ್ಸ್ ಅಂಡ್ ರಿಟೇಲ್, ಟೆಲಿಕಾಂ, ಬಿಪಿಒ, ಟೆಕ್ಸ್ಟೈಲ್, ಬ್ಯಾಂಕಿಂಗ್, ಫೈನಾನ್ಸ್, ಇನ್ಸೂರೆನ್ಸ್, ಹಾಸ್ಪಿಟಲ್ ಸೇರಿದಂತೆ ಸುಮಾರು 100 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. * ಈ ಉದ್ಯೋಗದಲ್ಲಿ ಭಾಗವಹಿಸಲು ಅಭ್ಯರ್ಥಿಗಳು SSLC ಯಿಂದ ಹಿಡಿದು ಸ್ನಾತಕೋತ್ತರ ಪದವಿ(PG) ವರೆಗಿನ ಯಾವುದೇ ವಿದ್ಯಾರ್ಹತೆ ಹೊಂದಿದ್ದರೂ ಕೂಡ ಪಾಲ್ಗೊಳ್ಳಬಹುದಾಗಿದೆ. * ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕನಿಷ್ಠ 18 ವರ್ಷ ಮೇಲ್ಪಟ್ಟು ಹಾಗೂ 35 ವರ್ಷ ಒಳಗಿನ ವಯೋಮಾನದ ಪುರುಷರು ಮಹಿಳೆಯರು ಹಾಗೂ ವಿಶೇಷಚೇತನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ * ಈ ಮೇಳಕ್ಕೆ ಭಾಗವಹಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. * ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9449702768 / 7892924199 ಉದ್ಯೋಗ ಮೇಳ ನಡೆಯುವ ಸ್ಥಳ : ಎಸ್ ಜಿ ಬಾಳೇಕುಂದ್ರಿ ಇನ್ಸ್ಟೂಟ್ ಆಫ್ ಟೆಕ್ನಾಲಜಿ ಕಾಲೇಜು ಕ್ಯಾಂಪಸ್, ಶಿವಬಸವನಗರ, ಬೆಳಗಾವಿ
Discussion & Comments (1)

Have a query or feedback about this update?

R
Raju Shindhe
26 ಫೆಬ್ರವರಿ 2020, 02:26 ಅಪರಾಹ್ನ

Helpful information thanks

Stay Updated with KPSC Vaani

Get instant notifications for exam alerts, question papers, syllabus, and results directly on your phone.