ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (BEMUL) ದಲ್ಲಿನ 46 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ದಿನಾಂಕ 26 ಆಗಸ್ಟ್ 2023 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ಈ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 19 ನವೆಂಬರ್ 2023 ರಂದು ಬೆಳಗಾವಿ ಮಹಾನಗರದಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ (Admit Card) ಇದೀಗ ಪ್ರಕಟಗೊಂಡಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ಸ್ಥಳ ಮತ್ತು ದಿನಾಂಕದಂದು ಕಡ್ಡಾಯವಾಗಿ ಹಾಜರಿರುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪತ್ರ ಪ್ರಕಟಣೆ
Published by Bhagya R K
09 ನವೆಂಬರ್ 2023
Others