ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿ ಇದೀಗ ಪ್ರಕಟ

ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿ ಇದೀಗ ಪ್ರಕಟ
Published by Bhagya R K
02 ಜೂನ್ 2025 Others

ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ದಿನಾಂಕ 14.10.2024 ರಂದು ಕಿರಿಯ ಪವರ್‌ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಸಹನ ಶಕ್ತಿ ಪರೀಕ್ಷೆಗೆ 1:5 ಅನುಪಾತದಲ್ಲಿ Shortlist ಆಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಟ್- ಆಫ್ (Cut-off) ಅಂಕಗಳೊಂದಿಗೆ ಬೆಸ್ಕಾಂನ ಅಂತರ್ಜಾಲ ದಲ್ಲಿ ಬಿಡುಗಡೆಮಾಡಲಾಗಿದ್ದು ಇದೀಗ ಸಹ ಶಕ್ತಿ ಪರೀಕ್ಷೆಯನ್ನು ದಿನಾಂಕ 09.06.2025 ರಿಂದ 12.06.2015 ವರೆಗೆ ಬೆಂಗಳೂರಿನಲ್ಲಿ ವಿವಿಧ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಸಹನ ಶಕ್ತಿ ಪರೀಕ್ಷೆಯ ಕರೆ ಪತ್ರಗಳನ್ನು ಬೆಸ್ಕಾಂನ ಅಂತರ್ಜಾಲ 02.06.2025 ರಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.  

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಮತ್ತು ಯಾವುದೇ ನವೀಕರಣಗಳಿಗಾಗಿ ಅಭ್ಯರ್ಥಿಗಳು ನಿರಂತರವಾಗಿ ಬೆಸ್ಕಾಂನ ವೆಬ್‌ಸೈಟ್‌ಗೆ ಭೇಟಿ ನೀಡುವುದು ಸೂಕ್ತ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.