Others 03 ಸೆಪ್ಟೆಂಬರ್ 2025 1 year ago
Published by Bhagya R K

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನೇಮಕಾತಿ 2025: ಯೋಜನಾ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನೇಮಕಾತಿ 2025: ಯೋಜನಾ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಪ್ರಕಾರ ಯೋಜನಾ ಮೇಲ್ವಿಚಾರಕ (Project Supervisor) ಹುದ್ದೆಗಳಿಗೆ ಒಟ್ಟು 05 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2025ರ ಸೆಪ್ಟೆಂಬರ್ 19ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :
ಸಂಸ್ಥೆ ಹೆಸರು: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL)
ಹುದ್ದೆ ಹೆಸರು: ಯೋಜನಾ ಮೇಲ್ವಿಚಾರಕ
ಒಟ್ಟು ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿಯ ವಿಧಾನ: ಆನ್‌ಲೈನ್

ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹45,000 ರಿಂದ ₹48,000 ರೂ. ವೇತನ ನೀಡಲಾಗುತ್ತದೆ.

ವಯೋಮಿತಿ:
ಅಭ್ಯರ್ಥಿಗಳು ಗರಿಷ್ಠ ವಯಸ್ಸು: 32 ವರ್ಷ (ಅಧಿಸೂಚನೆಯ ಪ್ರಕಾರ) ಗಳ ವಯೋಮಿತಿಯನ್ನು ಹೊಂದಿರಬೇಕು. 

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಪೂರೈಸಿರಬೇಕು.

ಆಯ್ಕೆ ವಿಧಾನ :
ಅಧಿಸೂಚನೆಯಲ್ಲಿ ವಿವರಿಸಿದಂತೆ, ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನಡೆಯುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ (ಹಾರ್ಡ್ ಕಾಪಿ) :
AGM (HR),
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್,
ಎಲೆಕ್ಟ್ರಾನಿಕ್ಸ್ ವಿಭಾಗ,
PB ಸಂಖ್ಯೆ: 2606,
ಮೈಸೂರು ರಸ್ತೆ,
ಬೆಂಗಳೂರು – 560026

ಅರ್ಜಿ ಸಲ್ಲಿಸುವ ವಿಧಾನ :
- ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಓದಿ.
- ಆನ್‌ಲೈನ್ ಅರ್ಜಿ ನಮೂನೆ ಭರ್ತಿ ಮಾಡಿ.
- ಅಗತ್ಯ ದಾಖಲೆಗಳು ಹಾಗೂ ಫೋಟೋ ಲಗತ್ತಿಸಿ.
- ಅರ್ಜಿಯ ಹಾರ್ಡ್ ಕಾಪಿಯನ್ನು ಮೇಲ್ಕಾಣಿಸಿದ ವಿಳಾಸಕ್ಕೆ ಕಳುಹಿಸಿ.
- ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಅನಿವಾರ್ಯ.

ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-08-2025
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-ಸೆಪ್ಟೆಂಬರ್-2025
- ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳ ಹಾರ್ಡ್ ಪ್ರತಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ: 22-ಸೆಪ್ಟೆಂಬರ್-2025
- ದೂರದ ಪ್ರದೇಶಗಳಿಂದ ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ: 24-ಸೆಪ್ಟೆಂಬರ್-2025

✅ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು BHEL ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ – ಸರ್ಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳಿ!

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.