Others 11 ಸೆಪ್ಟೆಂಬರ್ 2025 1 year ago
Published by Bhagya R K

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ (BMRCL) ನೇಮಕಾತಿ 2025: ಅಕ್ಸ್‌ಪರ್ಟ್ ಡೆವಲಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ (BMRCL) ನೇಮಕಾತಿ 2025: ಅಕ್ಸ್‌ಪರ್ಟ್ ಡೆವಲಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) 2025 ರ ತನ್ನ ಅಧಿಕೃತ ಅಧಿಸೂಚನೆಯ ಮೂಲಕ 05 ಅಕ್ಸ್‌ಪರ್ಟ್ ಡೆವಲಪರ್ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-ಸೆಪ್ಟೆಂಬರ್-2025 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ವಿವರಗಳು : 
ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL)
ಹುದ್ದೆಯ ಹೆಸರು: ಅಕ್ಸ್‌ಪರ್ಟ್ ಡೆವಲಪರ್
ಒಟ್ಟು ಹುದ್ದೆಗಳು: 05
ಅಧಿಸೂಚನೆ ಸಂಖ್ಯೆ: BMRCL/HR/0015/IT/2025
ವೇತನ: ₹62,500/- ಪ್ರತಿಮಾಸ
ಅರ್ಜಿಯ ಅಂತಿಮ ದಿನಾಂಕ: 12-09-2025

ಅರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE / B.Tech / BCA / B.Sc (ಅಥವಾ ಸಮಾನ ಪದವಿ) ವಿದ್ಯಾರ್ಹತೆಗಳಲ್ಲಿ ಯಾವುದಾದರೂ ಹೊಂದಿರಬೇಕು:

ವಯೋಮಿತಿ : 
ಗರಿಷ್ಠ ವಯಸ್ಸು: 36 ವರ್ಷ
ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ಅರ್ಜಿ ಶುಲ್ಕ : 
ಅಧಿಸೂಚನೆಯಲ್ಲಿ ವಿವರಿಸಲಾಗಿಲ್ಲ.

ಆಯ್ಕೆ ವಿಧಾನ : 
ಅಧಿಸೂಚನೆಯ ಪ್ರಕಾರ ಶಾರ್ಟ್‌ಲಿಸ್ಟಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ : 
- ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ bmrc.co.in ಗೆ ಭೇಟಿ ನೀಡಿ.
- ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಆನ್‌ಲೈನ್ ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ಕಾಪಿ ಸಂಗ್ರಹಿಸಿಕೊಳ್ಳಿ.

ಪ್ರಮುಖ ದಿನಾಂಕಗಳು
- ಅರ್ಜಿಯ ಪ್ರಾರಂಭ ದಿನಾಂಕ: 08-09-2025
- ಅರ್ಜಿಯ ಕೊನೆಯ ದಿನಾಂಕ: 12-09-2025

👉 ಬೆಂಗಳೂರು ಮೆಟ್ರೋದಲ್ಲಿ ಐಟಿ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.