Others 28 ಜುಲೈ 2025 1 year ago
Published by Yallamma G

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ನಲ್ಲಿ ಖಾಲಿ ಇರುವ ವಿವಿಧ 3 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ನಿಗಮವು ಮೆಟ್ರೋ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ಭದ್ರತೆ ಮತ್ತು ಇತರ ಸಂಬಂಧಿತ ಕೆಲಸಗಳನ್ನು ನಿರ್ವಹಿಸಲುಪ್ರಧಾನ ವ್ಯವಸ್ಥಾಪಕರು, ಮುಖ್ಯ ಭದ್ರತಾ ಅಧಿಕಾರಿ ಮತ್ತು ಮುಖ್ಯ ಅಗ್ನಿಶಾಮಕ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಬೆಂಗಳೂರು - ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ

ಹುದ್ದೆಗಳ ವಿವರ : 
ಪ್ರಧಾನ ವ್ಯವಸ್ಥಾಪಕರು : 1
ಮುಖ್ಯ ಭದ್ರತಾ ಅಧಿಕಾರಿ : 1
ಮುಖ್ಯ ಅಗ್ನಿಶಾಮಕ ಅಧಿಕಾರಿ : 1 

ವಿದ್ಯಾರ್ಹತೆ : BMRCL ನೇಮಕಾತಿ ಮಾನದಂಡಗಳ ಪ್ರಕಾರ. 

ವಯಸ್ಸಿನ ಮಿತಿ : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25-ಜುಲೈ-2025 ರಂತೆ 62 ವರ್ಷಗಳಿಗಿಂತ ಕಡಿಮೆಯಿರಬೇಕು.

ಮಾಸಿಕ ವೇತನ : 
ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ : ರೂ.206250-210693/-
ಮುಖ್ಯ ಭದ್ರತಾ ಅಧಿಕಾರಿ ಮತ್ತು ಮುಖ್ಯ ಅಗ್ನಿಶಾಮಕ ಅಧಿಕಾರಿ ಹುದ್ದೆಗಳಿಗೆ : ರೂ.126746-164000/-

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ: ಉಲ್ಲೇಖಿಸಲಗಿರುವುದಿಲ್ಲ

ಅರ್ಜಿ ಸಲ್ಲಿಸುವ ವಿಳಾಸ : 
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು - 560027 ಗೆ ಆಗಸ್ಟ್ 25-2025 ರಂದು ಅಥವಾ ಅದಕ್ಕೂ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-07-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಆಗಸ್ಟ್-2025
ಸಹಿ ಮಾಡಿದ ಅರ್ಜಿಯ ಮುದ್ರಣವನ್ನು ಸ್ವೀಕರಿಸಲು ಕೊನೆಯ ದಿನಾಂಕ: 25-ಆಗಸ್ಟ್-2025

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.