Add KPSC Vaani to your Home Screen. In Safari, tap Share, then Add to Home Screen.

KEAಯಿಂದ ಅಧಿಸೂಚಿಸಲಾದ BMTC ನಿರ್ವಾಹಕರು (Conductor) ಹುದ್ದೆಗಳ ಅಂತಿಮ ಅಂಕ ಪಟ್ಟಿ ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

KEAಯಿಂದ ಅಧಿಸೂಚಿಸಲಾದ BMTC ನಿರ್ವಾಹಕರು (Conductor) ಹುದ್ದೆಗಳ ಅಂತಿಮ ಅಂಕ ಪಟ್ಟಿ ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
25 ಸೆಪ್ಟೆಂಬರ್ 2024 Others

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ನಿರ್ವಾಹಕರು (Conductor) ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ KEA ಯು ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿ ಪರೀಕ್ಷೆಯನ್ನು ದಿನಾಂಕ 2024 ಸೆಪ್ಟೆಂಬರ್- 01 ರಂದು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಲಾಗಿತ್ತು. ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ 11.09.2024 ರಂದು ಪ್ರಕಟಿಸಲಾಗಿರುತ್ತದೆ. ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್ ಮೂಲಕ ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18.09.2024 ಸಂಜೆ 5.30 ರೊಳಗೆ ನಿಗದಿತ ಲಿಂಕ್ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿತ್ತು. ತಾತ್ಕಾಲಿಕ ಅಂಕ ಪಟ್ಟಿಗೆ ಸ್ವೀಕೃತವಾದ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಭ್ಯರ್ಥಿಯು ಪರೀಕ್ಷೆಯಲ್ಲಿ ಗಳಿಸಿದ ಅಂತಿಮ ಅಂಕಗಳನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಅಂಕಗಳನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಅಂಕಗಳಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.