ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:15 ಮಾರ್ಚ್ 2025
Image not found

ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ FLC ಕೌಂಸೆಲ್ಲೋರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 


ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. 


ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ 64 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.


ವೇತನ ಶ್ರೇಣಿ :
ಅಭ್ಯರ್ಥಿಗಳು ಮಾಸಿಕ ರೂ.18,000/- ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 


ಅರ್ಜಿಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.


ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 09/04/2025

Comments

*