Karnataka State Police
31 ಮೇ 2019
7 years ago
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಕಳೆದ ವರ್ಷದ(2018) ಮೇ 28 ನೇ ತಾರೀಕಿನಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 190 ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್(civil sub-inspector) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಮತ್ತು ವಿವಿಧ ಹಂತಗಳಲ್ಲಿ ಈ ಹುದ್ದೆಗೆ ದೈಹಿಕ ಪರೀಕ್ಷೆ ನಡೆಸಿ, 13-01-2019 ರಂದು ಲಿಖಿತ ಪರೀಕ್ಷೆಯನ್ನು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾಗಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದು.