ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲ (CUK) ದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲ (CUK) ದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
21 ಫೆಬ್ರವರಿ 2025 Others

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (CUK) ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ವಿವರಗಳು :
ಸಹಾಯಕ ಪ್ರಾಧ್ಯಾಪಕರು - 3 
ಪ್ರಾಧ್ಯಾಪಕರು - 5 
ಅಸೋಸಿಯೇಟ್ ಪ್ರೊಫೆಸರ್ - 2 
ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) - 1 

ವಿದ್ಯಾರ್ಹತೆ :
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, Diploma, Phd, BE/B.Tech ಅಥವಾ M.Phil ಪೂರ್ಣಗೊಳಿಸಿರಬೇಕು.

ವಯೋಮಿತಿ :
ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳಾಗಿರಬೇಕು.

ಅರ್ಜಿಶುಲ್ಕ :
- ಬೋಧನಾ ಹುದ್ದೆಗಳು :
  - ಮಹಿಳಾ/ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
  - SC/ST ಅಭ್ಯರ್ಥಿಗಳಿಗೆ : ₹1000/-
  - ಯುಆರ್/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹2500/-

- ಬೋಧಕೇತರ ಹುದ್ದೆಗಳು :
  - SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ : ಇಲ್ಲ
  - ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳಿಗೆ : ₹1000/-

ವೇತನ ಶ್ರೇಣಿ :
ಹುದ್ದೆಯ ಪ್ರಕಾರ ₹35,400/- ರಿಂದ ₹1,12,400/- ವರಗೆ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :
ಕಿರುಪಟ್ಟಿ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್ [https://cuk.ac.in/#/home](https://cuk.ac.in/#/home) ಗೆ ಭೇಟಿ ನೀಡಿ.
2. ಅಧಿಸೂಚನೆಯನ್ನು ಓದಿ, ಅರ್ಜಿಯ ಅರ್ಹತೆಗಳ ಪರಿಶೀಲನೆ ಮಾಡಿ.
3. ಅರ್ಜಿ ನಮೂನೆಯನ್ನು ಶುದ್ಧವಾಗಿ ಭರ್ತಿ ಮಾಡಿ.
4. 22-03-2025 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
5. ಹಾರ್ಡ್ ಕಾಪಿಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಿ:

ಅರ್ಜಿ ಸಲ್ಲಿಸುವ ವಿಳಾಸ :
 Deputy Registrar, Recruitment Cell, Central University of Karnataka,
Kadaganchi, Aland Road, Kalaburagi District-585367

ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-02-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2025
- ಹಾರ್ಡ್ ಕಾಪಿ ಸಲ್ಲಿಸಲು ಕೊನೆಯ ದಿನಾಂಕ: 01-04-2025

ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಅರ್ಜಿಯನ್ನು ಸಲ್ಲಿಸಿ, ಸರ್ಕಾರೀ ಹುದ್ದೆ ಪಡೆಯುವ ಅವಕಾಶವನ್ನು ಬಳಸಿಕೊಳ್ಳಲು ಸಲಹೆ ನೀಡಲಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.