Others 03 ಜೂನ್ 2019 7 years ago

KEA ಯಿಂದ ನಡೆಸಲಾಗುವ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (DCET)-2019 ಪರೀಕ್ಷೆ ಮುಂದೂಡಿಕೆ

KEA ಯಿಂದ ನಡೆಸಲಾಗುವ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (DCET)-2019 ಪರೀಕ್ಷೆ ಮುಂದೂಡಿಕೆ
ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (ಡಿಸಿಇಟಿ) 2019ರ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕರಿಸಿದೆ. ಜೂನ್ 7ರಂದು ನಡೆಸಲು ಉದ್ದೇಶಿಸಲಾಗಿದ್ದ ಡಿಸಿಇಟಿ ಪರೀಕ್ಷೆ ಜುಲೈ 14 ಕ್ಕೆ ಮುಂದೂಡಲಾಗಿದೆ. ಜುಲೈ 7ರಂದೇ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರ ನಾಟಾ ಪರೀಕ್ಷೆ ನಿಗದಿಯಾಗಿದೆ. ಅದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ಮುಂದೂಡಲಾಗಿದೆ. ಎಂದು ಕೆಳ ಅಧಿಸೂಚನೆಯಲ್ಲಿ ತಿಳಿಸಿದೆ. ಜುಲೈ 14 ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸಂಬಂಧಪಟ್ಟ ವಿಷಯಗಳಿಗೆ 180 ಅಂಕಗಳಿಗೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.ಮದ್ಯಾನ್ನ 3 ಗಂಟೆಯಿಂದ 4 ಗಂಟೆಯವರೆಗೆ ಬೆಂಗಳೂರಿನಲ್ಲಿ ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ 50 ಅಂಕಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
Official Notifications & Links
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.