ಕಲಬುರಗಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:28 ಮಾರ್ಚ್ 2025
Image not found

ಕಲಬುರಗಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ24 ವೈದ್ಯಾಧಿಕಾರಿಗರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ಶುಶ್ರೋಷಕಿಯರು ವಿವಿಧ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 


ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 10ನೇ ತರಗತಿ, ಡಿಪ್ಲೊಮಾ, MBBS, B.Sc ನರ್ಸಿಂಗ್/ ಪೂರ್ಣಗೊಳಿಸಿರಬೇಕು.


ವಯೋಮಿತಿ :
ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳನ್ನು ಹೊಂದಿರಬೇಕು.


ಅರ್ಜಿಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ವೇತನ ಶ್ರೇಣಿ:
ಮಾಸಿಕ ₹15,099 – 60,000/- ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ:
ಕಂಪ್ಯೂಟರ್ ಸಾಕ್ಷರತೆ, ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌ https://kalaburagi.nic.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ DHFWS ಕಲ್ಬುರ್ಗಿ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 03-04-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.


ಅರ್ಜಿಸಲ್ಲಿಸುವ ವಿಧಾನ:
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 25-03-2025 ರಿಂದ  03-04-2025 ರೊಳಗೆ DHFWS ಕಲ್ಬುರ್ಗಿ ನೇಮಕಾತಿ ಅಧಿಕೃತ ವೆಬ್‌ಸೈಟ್ https://kalaburagi.nic.in/ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-03-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2025

Comments