ಆರೋಗ್ಯ ಇಲಾಖೆಯಲ್ಲಿ ಉದ್ಯೋಗ: ಕಲಬುರಗಿ DHFWS ನಲ್ಲಿ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ; ಸೆ.27 ಕೊನೆ ದಿನ!

ಆರೋಗ್ಯ ಇಲಾಖೆಯಲ್ಲಿ ಉದ್ಯೋಗ: ಕಲಬುರಗಿ DHFWS ನಲ್ಲಿ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ; ಸೆ.27 ಕೊನೆ ದಿನ!
Published by Yallamma G
19 ಸೆಪ್ಟೆಂಬರ್ 2026 Health and ​​Family Welfare ​​Services

DHFWS Kalaburagi Recruitment 2026: ಕಲಬುರಗಿ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ; ಆನ್‌ಲೈನ್ ಅರ್ಜಿ ಸಲ್ಲಿಕೆ ಶುರು!

 

KPSCVaani ಸುದ್ದಿಜಾಲ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (NHM) ಕಲಬುರಗಿ ಜಿಲ್ಲೆಯ RBSK ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS) ಅಧಿಕೃತ ಅಧಿಸೂಚನೆ ಹೊರಡಿಸಿದೆ.   

 

ಮೆರಿಟ್ ಆಧಾರದ ಮೇಲೆ ನಡೆಯುವ ಈ ನೇಮಕಾತಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಸಂಪೂರ್ಣ ವಿವರಣೆ ಇಲ್ಲಿದೆ. 

 

ಹುದ್ದೆಗಳ ವಿವರ, ವಿದ್ಯಾರ್ಹತೆ ಮತ್ತು ಮಾಸಿಕ ವೇತನ
ಈ ಅಧಿಸೂಚನೆಯ ಮೂಲಕ ಒಟ್ಟು 3 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಎಲ್ಲಾ ಹುದ್ದೆಗಳು ಸಾಮಾನ್ಯ ವರ್ಗಕ್ಕೆ (Un-Reserved) ಮೀಸಲಾಗಿವೆ. ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ನಿಗದಿಪಡಿಸಲಾಗಿದೆ.

 

ಪ್ರತಿದಿನದ ಪ್ರಚಲಿತ ಘಟನೆಗಳ ಆಧಾರಿತ ಕ್ವಿಜ್‌ನಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ

 

ಆಡಿಯಾಲಜಿಸ್ಟ್ / ಸ್ಪೀಚ್ ಥೆರಪಿಸ್ಟ್ (Audiologist / Speech Therapist) : RCI ಮಾನ್ಯತೆ ಪಡೆದ ಸಂಸ್ಥೆಯಿಂದ ಸ್ಪೀಚ್ ಮತ್ತು ಲ್ಯಾಂಗ್ವೇಜ್ ಪ್ಯಾಥಾಲಜಿಯಲ್ಲಿ ಪದವಿ (BASLP). ವೇತನ -₹25,000/-

 

ಆಪ್ಟೋಮೆಟ್ರಿಸ್ಟ್ (Optometrist) : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಆಪ್ಟೋಮೆಟ್ರಿಯಲ್ಲಿ ಪದವಿ (Bachelor) ಅಥವಾ ಸ್ನಾತಕೋತ್ತರ (Master) ಪದವಿ.  ವೇತನ - ₹18,766/-   

 

ಕ್ಲಿನಿಕಲ್ ಸೈಕಾಲಜಿಸ್ಟ್ (Clinical Psychologist) : RCI ಮಾನ್ಯತೆ ಪಡೆದ ಸಂಸ್ಥೆಯಿಂದ ಚೈಲ್ಡ್ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ.  ವೇತನ - ₹25,000/-   

 

ವಿಶೇಷ ಸೂಚನೆ: ಈ ಮೇಲಿನ ಎಲ್ಲಾ ಹುದ್ದೆಗಳಿಗೂ ಸಾರ್ವಜನಿಕ ಆರೋಗ್ಯ ವಲಯದಲ್ಲಿ (ಸರ್ಕಾರಿ ಅಥವಾ NGO) ಕನಿಷ್ಠ 2 ವರ್ಷಗಳ ಕಾರ್ಯಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

 

ಅರ್ಜಿ ಸಲ್ಲಿಕೆ ವಿಧಾನ ಮತ್ತು ಕಡ್ಡಾಯ ನಿಯಮಗಳು :ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಕೆಳಗಿನ ಪ್ರಮುಖ ಅಂಶಗಳನ್ನು ಗಮನಿಸಬೇಕು:

  1. ಆನ್‌ಲೈನ್ ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಅಗತ್ಯ ದಾಖಲೆಗಳನ್ನು ಕಲಬುರಗಿ ಜಿಲ್ಲೆಯ ಅಧಿಕೃತ NIC ವೆಬ್‌ಸೈಟ್ https://kalaburagi.nic.in ನಲ್ಲಿ ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಬೇಕು.  
  2. ಪ್ರಮುಖ ದಿನಾಂಕಗಳು: ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 17/09/2026 ರಿಂದ ಪ್ರಾರಂಭವಾಗಿದ್ದು, 27/09/2026 ರವರೆಗೆ ಅವಕಾಶವಿರುತ್ತದೆ.  
  3. ಕಡ್ಡಾಯ ದಾಖಲೆಗಳು: ಎಸ್‌.ಎಸ್.ಎಲ್.ಸಿ ಅಂಕಪಟ್ಟಿ, ಪದವಿ/ಸ್ನಾತಕೋತ್ತರ ಅಂಕಪಟ್ಟಿಗಳು, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ ಪ್ರಮಾಣ ಪತ್ರ, 371(ಜೇ) ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರು, ಹಾಗೂ ಅಂಗವಿಕಲ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ನಲ್ಲಿ ಕಡ್ಡಾಯವಾಗಿ ಲಗತ್ತಿಸಬೇಕು.  
  4. ಕಂಪ್ಯೂಟರ್ ಜ್ಞಾನ ಕಡ್ಡಾಯ: ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸಂಸ್ಥೆಯಿಂದ ಪಡೆದ ಕಂಪ್ಯೂಟರ್ ಸಾಕ್ಷರತಾ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.  
  5. ಮುಕ್ತ ವಿಶ್ವವಿದ್ಯಾಲಯ (Open University): ಮುಕ್ತ ವಿಶ್ವವಿದ್ಯಾಲಯದ ಮೂಲಕ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಈ ನೇಮಕಾತಿಯಲ್ಲಿ ಅವಕಾಶವಿರುವುದಿಲ್ಲ.  
  6. ಮೂಲ ದಾಖಲಾತಿ ಪರಿಶೀಲನೆ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಲಭ್ಯವಾಗುವ ಸ್ವೀಕೃತಿ ಪತ್ರವನ್ನು (Acknowledgement) ಮುಂದಿನ ಮೂಲ ದಾಖಲಾತಿ ಪರಿಶೀಲನೆಗೆ ಕಡ್ಡಾಯವಾಗಿ ಸಲ್ಲಿಸಬೇಕು.

 

ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಯಾವುದೇ ಬದಲಾವಣೆಗಳು ಅಥವಾ ಅಂತಿಮ ತೀರ್ಮಾನವು ಆಯ್ಕೆ ಸಮಿತಿಯ ಅಧಿಕಾರಕ್ಕೆ ಒಳಪಟ್ಟಿರುತ್ತದೆ. ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ಕಲಬುರಗಿ NIC ವೆಬ್‌ಸೈಟ್ ಮತ್ತು KPSCVaani ಜಾಲತಾಣವನ್ನು ವೀಕ್ಷಿಸುತ್ತಿರಿ.

 

Advertisement
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.