ಬೆಂಗಳೂರಿನಲ್ಲಿರುವ ಡಾ ರಾಜಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವಿಸಿಸ್ ಸಂಸ್ಥೆಯು ಐಎಎಸ್ ಪರೀಕ್ಷಾರ್ಥಿಗಳಿಗಾಗಿ ಉಚಿತ ತರಬೇತಿಗಾಗಿ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ನಡೆಸಲು ಯೋಜಿಸಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಗುವದು. ಈ ಪರೀಕ್ಷೆಯನ್ನು ಕರ್ನಾಟಕದ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಮಂಗಳೂರು ಹಾಗೂ ಹೈದರಾಬಾದ್, ಚೆನ್ನೈ, ತಿರುವನಂತಪುರ, ದೆಹಲಿ ಹಾಗೂ ಗುಹಾವತಿಯಲ್ಲಿ ಪರೀಕ್ಷೆಗಳನ್ನು ಆಯೋಜಿಸಿದ್ದು, ಅಭ್ಯರ್ಥಿಗಳು ತಮಗೆ ಸಮೀಪದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
- ಈ ಸಂಸ್ಥೆಯಲ್ಲಿ ಉಚಿತ ಐಎಎಸ್ ತರಬೇತಿಯನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ದಿನಾಂಕ 20 ಏಪ್ರಿಲ್ 2021ರೊಳಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು.
- ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು UPSC ನಾಗರಿಕ ಸೇವೆಗಳ ಪರೀಕ್ಷೆ 2021 ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆಗಾಗಿ ಈ ಸಂಸ್ಥೆಯ ಬೋಧನಾ ಶುಲ್ಕದಲ್ಲಿ ಶೇಕಡಾ 100 ವರೆಗೆ ರಿಯಾಯಿತಿ, ಕೋರ್ಸ್ ಮುಗಿಯುವವರೆಗೆ ಉಚಿತ ತರಬೇತಿ ಹಾಗೂ ವಸತಿ ಸೌಲಭ್ಯ, ಸ್ಟೈಪಂಡ್, ಆನ್ ಲೈನ್ ತರಬೇತಿ, ಟೆಸ್ಟ್ ಸರಣಿ ಸೇರಿ ವಿವಿಧ ಸೌಲಭ್ಯ ಪಡೆಯಬಹುದಾಗಿದೆ.
- ಅಭ್ಯರ್ಥಿಗಳು ಈ ಪರೀಕ್ಷೆ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಸಂಸ್ಥೆಯ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು ಹಾಗೂ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಕೂಡಲೇ ಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಕೂಡಲೇ ಇಲ್ಲಿ ಕ್ಲಿಕ್ ಮಾಡಿ
Comments