ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ FIREMAN ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ FIREMAN ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
09 ಸೆಪ್ಟೆಂಬರ್ 2024 Others

ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಿಂದ 227 (199+28) ಅಗ್ನಿಶಾಮಕ ಚಾಲಕ (Fireman Driver) ಮತ್ತು 82 ಅಗ್ನಿಶಾಮಕ ಚಾಲಕ ತಂತ್ರಜ್ಞ (Driver Mechanic) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 18-06-2020 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯು ಅಂತಿಮ ಆಯ್ಕೆ ಪಟ್ಟಿಯನ್ನು ಇದೀಗ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳಿಗಳು ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ. 

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.