ಭಾರತೀಯ ಆಹಾರ ನಿಗಮ ನೇಮಕಾತಿ : ಜೆಇ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳ ಫೇಸ್ II ರ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ.

ಭಾರತೀಯ ಆಹಾರ ನಿಗಮ ನೇಮಕಾತಿ : ಜೆಇ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳ ಫೇಸ್ II ರ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ.
17 ಜುಲೈ 2019 Others
ಎಫ್‌ಸಿಐ 2019 ಜೆಇ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಫೇಸ್ II ರ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಭಾರತೀಯ ಆಹಾರ ನಿಗಮ 4103 ಜ್ಯೂನಿಯರ್ ಇಂಜಿನಿಯರ್ (JE) (ಸಿವಿಲ್ ಇಂಜಿನಿಯರಿಂಗ್/ಇಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್), ಮತ್ತು ಅಸಿಸ್ಟೆಂಟ್ ಗ್ರೇಡ್ -|| (ಎಜಿ||) (ಹಿಂದಿ), ಸ್ಟೆನೋ ಗ್ರೇಡ್-||, ಟೈಪಿಸ್ಟ್ (ಹಿಂದಿ) ಮತ್ತು ಅಸಿಸ್ಟೆಂಟ್ ಗ್ರೇಡ್ -||| (ಎಜಿ |||) (ಜನರಲ್ / ಅಕೌಂಟ್ಸ್ /ಟೆಕ್ನಿಕಲ್ /ಡಿಪೋಟ್ ) ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 25,2019 ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು,ಇದೇ ಜುಲೈ 27,2019 ರಂದು ಪರೀಕ್ಷೆಗಳು ನಡೆಯಲಿವೆ. ಪ್ರವೇಶ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್‌ನಿಂದ ತಮ್ಮ ಪ್ರವೇಶ ಪತ್ರವನ್ನು ಜುಲೈ 27,2019 ರೊಳಗೆ ಡೌನ್ ಲೋಡ್ ಮಾಡಿಕೊಳ್ಳಬಹುದು ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.