Loading..!

ಇನ್ನು UPSC ಮಾದರಿಯಲ್ಲಿ ನಡೆಯಲಿವೆಯಾ KPSC ಹಾಗೂ ರಾಜ್ಯ ಸರ್ಕಾರದ ಇತರೆ ನೇಮಕಾತಿಗಳು ಮುಖ್ಯಮಂತ್ರಿಗಳಿಂದ ಮಹತ್ವದ ಸಭೆ
Published by: Basavaraj Halli | Date:25 ಸೆಪ್ಟೆಂಬರ್ 2024
Image not found
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಪಿ.ಎಸ್‌.ಸಿ ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

* ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ವೇಳೆ ನೇಮಕಾತಿ ಪ್ರಕ್ರಿಯೆಗಳ ವಿಳಂಬ, ಕಾನೂನು ತೊಡಕು, 371 ಜೆ ಅಡಿ ಮೀಸಲಾತಿ, ಸಂಬಂಧಿಸಿದ ವಿವಿಧ ನೇಮಕಾತಿ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

* ಇನ್ನು ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಹಾಗೂ ನಿಗದಿತ ಗಡುವಿನೊಳಗೆ ಪ್ರಸ್ತಾವನೆ ಸಲ್ಲಿಕೆಗೆ ಸೂಚನೆ.

* ಪರೀಕ್ಷಾ ವೇಳಾಪಟ್ಟಿಯ ಜೊತೆಗೆ ಫಲಿತಾಂಶ ಪ್ರಕಟಣೆಯ ದಿನಾಂಕ ಕೂಡ ನಿಗದಿಪಡಿಸಲು ಸೂಚನೆ.

* ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ಪ್ರಸ್ತುತ ತೀವ್ರ ವಿಳಂಬವಾಗುತ್ತಿದ್ದು, ಇದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ತೊಂದರೆಯಾಗುತ್ತಿದೆ. ಈ ಕುರಿತು ಇಲಾಖಾ ಮುಖ್ಯಸ್ಥರು ಪ್ರತಿ ವಾರ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಿದರು.

* ಬರುವ ದಿನಗಳಲ್ಲಿ ಇನ್ನೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ಇದೆ ವೇಳೆ ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದರು.

- ಪ್ರಸ್ತುತ ಇರುವ ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಯಾಷ್ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದ್ದು, ಇನ್ನು ಕಳವು ಕಾರಣಗಳನ್ನು ಇದೆ ವೇಳೆ ಅಧಿಕಾರಿಗಳು ಸಭೆಗೆ ವಿವರಿಸಿದರು.

Comments

Mahantesh Badiger ಸೆಪ್ಟೆ. 26, 2024, 11:55 ಪೂರ್ವಾಹ್ನ