ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಫಲಿತಾಂಶ ಪ್ರಕಟ
25 ಸೆಪ್ಟೆಂಬರ್ 2019 KTET & GPSTR
ಕರ್ನಾಟಕ ರಾಜ್ಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 10,611 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಿದೆ. ಮೌಲ್ಯಮಾಪನ ನಡೆಸಿದ ಸಂದರ್ಭದಲ್ಲಿ 645 ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಮೂರನೇ ಮೌಲ್ಯಮಾ ಮೌಲ್ಯಮಾಪನಕ್ಕೆ ಒಳಪಡದೇ ಇರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮರು ಮೌಲ್ಯಮಾಪನ ನಡೆಸಿ, ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಫಲಿತಾಂಶ ಪರಿಷ್ಕೃತಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಜಾಲ ತಾಣದಲ್ಲಿ ಪ್ರಕಟಿಸಲಾಗಿದ್ದು ಈ ಹಿಂದೆ ಪಡೆದ ಅಂಕ ಹಾಗೂ ಪರಿಷ್ಕೃತ ಅಂಕಗಳ ಮಾಹಿತಿ ನೀಡಲಾಗಿದೆ. ಅಭ್ಯರ್ಥಿಗಳು ಪರಿಷ್ಕೃತ ಅಂಕಗಳಂತೆ ತಮ್ಮ ವೈಯಕ್ತಿಕ ಅಂಕಪಟ್ಟಿಯಲ್ಲಿ ತಿದ್ದುಪಡಿಯಾಗಿದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕೆಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ ಒಟ್ಟು 1,061 ಅಭ್ಯರ್ಥಿಗಳು ವೈಯಕ್ತಿಕ ಮಾಹಿತಿ ಬದಲಾವಣೆ ಹಾಗೂ ಮತ್ತಿತರ ತಪ್ಪುಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಶಿಕ್ಷಣ ಇಲಾಖೆ ಅವಕಾಶ ನೀಡಿತ್ತು. ಈ ಸಮಯದಲ್ಲಿ ಒಟ್ಟು ಒಂದು ಸಾವಿರದ ಅರವತ್ತೊಂದು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದು, ಅಭ್ಯರ್ಥಿಗಳು ನೀಡಿದ ಮಾಹಿತಿಯನ್ನು ಸರಿಪಡಿಸಿ ಇಲಾಖೆ ಜಾಲತಾಣದಲ್ಲಿ ಅಪ್ಡೇಟ್ ಮಾಡಲಾಗಿದೆ. ಅಭ್ಯರ್ಥಿಗಳ ಅಂಕಗಳಲ್ಲಿ ವ್ಯತ್ಯಾಸಗಳಿಗೆ ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ ಎಂದು ಇಲಾಖೆಯ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.