ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಖಾಲಿ ಇರುವ ಸುಮಾರು ಹದಿನೈದು ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ(GPSTR)ಗಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಆನ್ ಲೈನ್ ಮೂಲಕ ಸ್ವೀಕರಿಸಿತ್ತು, ಸದರಿ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ದಿನಾಂಕ 21 ಹಾಗೂ 22 ಮೇ 2022ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರವೇಶಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಇಲಾಖೆಯು ಅಭ್ಯರ್ಥಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದು ಈ ಸೂಚನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು.
ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ-2022ರ (GPSTR) ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ ಲೋಡ್ ಮಾಡಿಕೊಳ್ಳಿ
Published by Basavaraj Halli
13 ಮೇ 2022
KTET & GPSTR