ರಾಜ್ಯ ಸರ್ಕಾರದಿಂದ GPSTR ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ.

ರಾಜ್ಯ ಸರ್ಕಾರದಿಂದ GPSTR ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ.
Published by Yallamma G
28 ಫೆಬ್ರವರಿ 2023 KTET & GPSTR

ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ (6-8th) ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದಂತೆ ಇದೀಗ 1:1 ಅನುಪಾತದ ಪರಿಷ್ಕೃತ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ವಿಭಾಗವಾರು ಬಿಡುಗಡೆ ಮಾಡಲಾಗಿದ್ದು, ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಲಬುರ್ಗಿ ವಿಭಾಗ ಮತ್ತು ಬೆಳಗಾವಿ ವಿಭಾಗದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 1/3/2023 ರಿಂದ 4/3/2023 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.  
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.