ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:29 ಮಾರ್ಚ್ 2025
Image not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 2 ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.


ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, MBBS, MD, MS  ಪೂರ್ಣಗೊಳಿಸಿರಬೇಕು.


ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳನ್ನು ಹೊಂದಿರಬೇಕು.


ಅರ್ಜಿಶುಲ್ಕ:
HAL ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ಆಯ್ಕೆ ವಿಧಾನ:
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌‌ https://hal-india.co.in/home ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ HAL ಇಂಡಿಯಾ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಸಲಹೆಗಾರ, ಸಂದರ್ಶಕ ಸಲಹೆಗಾರ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌‌ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌


ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ‌ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌


ವಿಳಾಸ:
Consultant/ Advisor: Deputy General Manager (HR), Hindustan Aeronautics Limited, Aircraft Research and Design Centre, Marathahalli Post, Bangalore-56 0037.


ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-03-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-04-2025

Comments