ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
17 ಮೇ 2025 Others

ಭಾರತ ಸರ್ಕಾರದ ಗಣಿ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ 10 ಫೀಟರ್, ವೆಲ್ಡರ್, ಎಲೆಕ್ಟ್ರಿಷನ್ ಮತ್ತು ಪಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 10 
Fitter : 6
Plumber : 1
Electrician : 2
Welder (Gas & Electric) : 1

ವಿದ್ಯಾರ್ಹತೆ : 10th, ITI

ವಯೋಮಿತಿ : ಗರಿಷ್ಟ 21 ವರ್ಷ 
OBC Candidates: 03 ವರ್ಷ 
SC/ST Candidates: 05 ವರ್ಷ 

ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯ ಮೂಲಕ.

ಅರ್ಜಿ ಸಲ್ಲಿಸುವ ವಿಧಾನ : 
- ಮೊದಲನೆಯದಾಗಿ ಹಿಂದೂಸ್ತಾನ್ ಕಾಪರ್ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸ ಬೇಕಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಜೂನಿಯರ್ ಮ್ಯಾನೇಜರ್ (HR), ಹಿಂದೂಸ್ತಾನ್ ಕಾಪರ್ ಲಿಮಿಟೆಡ್, ತಲೋಜಾ ಕಾಪರ್ ಪ್ರಾಜೆಕ್ಟ್, E33-36, MIDC, ತಲೋಜಾ-410208, ಮಹಾರಾಷ್ಟ್ರ (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) 15-ಜೂನ್-2025 ರಂದು ಅಥವಾ ಮೊದಲು ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-05-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಜೂನ್-2025 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.