ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS) ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫಿಸರ್ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಕ್ಕೆ ನಡೆಸಲಿರುವ ಪೂರ್ವಬಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ವೆಬ್ ಸೈಟ್ ನಲ್ಲಿ ಒದಗಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ರೋಲ್ ನಂಬರ್ ಮತ್ತು ಜನ್ಮದಿನಾಂಕದೊಂದಿಗೆ ಲಾಗಿನ್ ಆಗಿ ಪ್ರವೇಶಪತ್ರ ಪಡೆದುಕೊಳ್ಳಬಹುದಾಗಿದೆ. ಅಕ್ಟೋಬರ್ 12 ರಿಂದ 20ರವರೆಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು ಇದರಲ್ಲಿ ಅರ್ಹತೆ ಪಡೆದವರು ಮಾತ್ರ ನವೆಂಬರ್ ನಲ್ಲಿ ನಡೆಯಲಿರುವ ಮುಖ್ಯ ಪರೀಕ್ಷೆ ಬರೆಯಬಹುದಾಗಿದೆ.
ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಾದ ದಿನಾಂಕ, ಸಮಯ ಮತ್ತು ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿರುತ್ತದೆ. ಇದರ ಜೊತೆಯಲ್ಲಿ ಪರೀಕ್ಷೆ ಹೇಗೆ ನಡೆಯಲಿದೆ ಎಂಬ ಮಾಹಿತಿಯನ್ನು ಒಳಗೊಂಡ ಕೈಪಿಡಿಯನ್ನು ಐಬಿಪಿಎಸ್ ವೆಬ್ ಸೈಟ್ ದಲ್ಲಿ ಒದಗಿಸಿದ್ದು, ಅಭ್ಯರ್ಥಿಗಳು ಇದನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದಾಗಿದೆ. ಈ ವರ್ಷ 9 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನ ಒಟ್ಟು 4336 ಹುದ್ದೆಗಳಿಗೆ ಈ ಪರೀಕ್ಷೆ ಮೂಲಕ ನೇಮಕ ನಡೆಯುತ್ತಿದೆ.

Comments