Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ಇಂಡಿಯನ್ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ (IIFCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇಂಡಿಯನ್ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್  (IIFCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
22 ಏಪ್ರಿಲ್ 2025 Others

ಇಂಡಿಯನ್ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್  (IIFCL) ಇಲ್ಲಿ ಖಾಲಿ ಇರುವ ಮ್ಯಾನೇಜರ್, ವೈಯಕ್ತಿಕ ಸಲಹೆಗಾರ ಹುದ್ದೆಗಳ ನೇಮಕಾತಿಗೆ ಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ  ಪದವಿ, ಸ್ನಾತಕೋತ್ತರ ಪದವಿ, ಬಿಇ ಅಥವಾ ಬಿ.ಟೆಕ್, MBA, MBE, CA, ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ 62 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಪಿಡಬ್ಲ್ಯೂಬಿಡಿ (ಯುಆರ್/ಇಡಬ್ಲ್ಯೂಎಸ್) ಅಭ್ಯರ್ಥಿಗಳು: 10 ವರ್ಷಗಳು
ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿಶುಲ್ಕ:
ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ:

ಪಾವತಿ ವಿಧಾನ: ಆನ್‌ಲೈನ್ ಮೂಲಕ
SC/ST/PwBD ಅಭ್ಯರ್ಥಿಗಳಿಗೆ: ₹100/-
ಯುಆರ್/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳಿಗೆ: ₹600/-

ವೇತನ ಶ್ರೇಣಿ:
ಮಾಸಿಕ ₹44,500-3,30,000/- ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಇಂಡಿಯನ್ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್  https://iifcl.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಇಂಡಿಯನ್ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಮ್ಯಾನೇಜರ್, ವೈಯಕ್ತಿಕ ಸಲಹೆಗಾರ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 14-05-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 16-04-2025 ರಿಂದ 14-05-2025 ರೊಳಗೆ ಇಂಡಿಯನ್ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಕೃತ ವೆಬ್‌ಸೈಟ್ https://iifcl.in/ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-04-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 14-05-2025
ಉದ್ಯೋಗ ಸ್ಥಳ: ಅಖಿಲ ಭಾರತ

Advertisement • Go Ad-Free
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.