ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science – IISc) ನೇಮಕಾತಿ 2025: ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science – IISc) ನೇಮಕಾತಿ 2025: ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Bhagya R K
11 ಅಕ್ಟೋಬರ್ 2025 Others

ಭಾರತದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc) 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಪ್ರಕಾರ, 07 ಪ್ರಾಜೆಕ್ಟ್ ಅಸೋಸಿಯೇಟ್-I (Project Associate-I) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು – ಕರ್ನಾಟಕದಲ್ಲಿ ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಅಕ್ಟೋಬರ್ 2025 ಆಗಿದೆ.

ನೇಮಕಾತಿ ವಿವರಗಳು:
ಸಂಸ್ಥೆ ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc)
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
ಒಟ್ಟು ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ವೇತನ ಶ್ರೇಣಿ: ₹30,000 ರಿಂದ ₹51,000 ಪ್ರತಿಮಾಸ

ಅರ್ಹತೆಗಳು:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ M.Sc ಪದವಿ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಗರಿಷ್ಠ ವಯಸ್ಸು: 35 ವರ್ಷ (30-10-2025ರ ಸ್ಥಿತಿಗೆ)ಗಳ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿಯ ಸಡಿಲಿಕೆ: ಐಐಎಸ್‌ಸಿ ನಿಯಮಾನುಸಾರ ಲಭ್ಯ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:
- ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ.
- IISc ಅಧಿಕೃತ ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ಭರ್ತಿ ಮಾಡಿ.
- ಅಗತ್ಯ ದಾಖಲೆಗಳು ಹಾಗೂ ಫೋಟೋಗಳನ್ನು ಅಪ್ಲೋಡ್ ಮಾಡಿ.
- ಅರ್ಜಿಯನ್ನು ಸಲ್ಲಿಸಿ ಮತ್ತು ಅಪ್ಲಿಕೇಶನ್ ನಂಬರನ್ನು ಉಳಿಸಿಕೊಳ್ಳಿ.

ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 09 ಅಕ್ಟೋಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2025

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.