IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:12 ಎಪ್ರಿಲ್ 2025
Image not found

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ  ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ  ಅಧಿಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ.  


ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ  ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.


ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳಿಗಿಂತ ಕಡಿಮೆಯಿರಬೇಕು.


ಅರ್ಜಿಶುಲ್ಕ:
ಪಿಡಬ್ಲ್ಯೂಬಿಡಿ/ಇಎಸ್‌ಎಂ/ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ: ಇರುವುದಿಲ್ಲ
ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹500/-
ಪಾವತಿ ವಿಧಾನ: ಆನ್‌ಲೈನ್ ಮೂಲಕ


ವೇತನ ಶ್ರೇಣಿ:
ಮಾಸಿಕ ₹80,000-1,10,000/- ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ  ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ https://iitdh.ac.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ IIT ಧಾರವಾಡ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ತರಬೇತಿ ಮತ್ತು ಉದ್ಯೋಗ ಅಧಿಕಾರಿ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.


ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 07-04-2025 ರಿಂದ 06-05-2025 ರೊಳಗೆ IIT ಧಾರವಾಡ ನೇಮಕಾತಿ ಅಧಿಕೃತ ವೆಬ್‌ಸೈಟ್ https://iitdh.ac.in/ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-04-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-05-2025

Comments