ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL) ತನ್ನ ಅಧಿಕೃತ ಅಧಿಸೂಚನೆಯ ಮೂಲಕ 382 ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕಗಳ ಒಳಗೆ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ವಿದ್ಯಾರ್ಹತೆ:
ಟ್ರೇಡ್ ಅಪ್ರೆಂಟಿಸ್: 10ನೇ ತರಗತಿ ಉತ್ತೀರ್ಣರಾಗಿದ್ದು, ಸಂಬಂಧಿತ ವಿಭಾಗದಲ್ಲಿ ITI ಪೂರೈಸಿರಬೇಕು.
ಟೆಕ್ನಿಷಿಯನ್ ಅಪ್ರೆಂಟಿಸ್: ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಹೊಂದಿರಬೇಕು.
ಗ್ರಾಜುಯೇಟ್ ಅಪ್ರೆಂಟಿಸ್: ಯಾವುದೇ ವಿಭಾಗದಲ್ಲಿ ಪದವಿ ಹೊಂದಿರಬೇಕು.
ವಯೋಮಿತಿ (31-01-2025 ರಂತೆ):
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 24 ವರ್ಷ
ವಯೋಮಿತಿ ಸಡಿಲಿಕೆ: ಸರಕಾರದ ನಿಯಮಾವಳಿಗಳ ಪ್ರಕಾರ ಅನ್ವಯವಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಅಭ್ಯರ್ಥಿಗಳು 24-01-2025 ರಿಂದ 14-02-2025 ಸಂಜೆ 5:00 ಗಂಟೆಯೊಳಗೆ IOCL ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 24-01-2025
ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ: 14-02-2025 ಸಂಜೆ 5:00 ಗಂಟೆ
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ IOCL ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
Comments