Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(K-SET)ತಾತ್ಕಾಲಿಕ ಫಲಿತಾಂಶ ಪಟ್ಟಿ ಪ್ರಕಟ
Published by: Akshata Basavaraj Halli | Date:5 ಜನವರಿ 2025
Image not found
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2024ರ ನವೆಂಬರ್ 24ರಂದು ನಡೆದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET-2024)ಯ ತಾತ್ಕಾಲಿಕ ಫಲಿತಾಂಶವನ್ನು ಜನವರಿ 4, 2025ರಂದು ಪ್ರಕಟಿಸಿದೆ.

ಈ ಪರೀಕ್ಷೆಗೆ ಒಟ್ಟು 1,06,433 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 89,413 ಮಂದಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ 6,302 ಅಭ್ಯರ್ಥಿಗಳು (ಹಾಜರಾದವರ ಶೇಕಡಾ 6) ಅರ್ಹತೆ ಪಡೆದಿದ್ದಾರೆ. ಅರ್ಹರಾದವರಲ್ಲಿ 3,275 ಪುರುಷರು, 3,020 ಮಹಿಳೆಯರು, ಮತ್ತು 7 ತೃತೀಯ ಲಿಂಗದವರು ಸೇರಿದ್ದಾರೆ. ವಿಶೇಷ ಸಾಮರ್ಥ್ಯವುಳ್ಳ 293 ಮಂದಿ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ.

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು KEA ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಅಂತಿಮ ಫಲಿತಾಂಶ ಮತ್ತು ಪ್ರಮಾಣಪತ್ರಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಜಿಲ್ಲಾವಾರು ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments