Loading..!

ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾವನೆ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:4 ಜುಲೈ 2024
Image not found

ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 10 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರವು ನಿರ್ಧರಿಸಿರುವುದಾಗಿ ಮಾನ್ಯ ಶಾಲಾ ಶಿಕ್ಷಣ ಆಯುಕ್ತೆ ಬಿ.ಬಿ.ಕಾವೇರಿ ಅವರು  ತಿಳಿಸಿರುತ್ತಾರೆ. ಸರಕಾರಿ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರು ಸೇರಿದಂತೆ ಒಟ್ಟಾರೆ 10,000 ಕ್ಕೂ ಅಧಿಕ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಇದೀಗ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯು ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ, ಅನುಮತಿ ಸಿಕ್ಕ ತಕ್ಷಣ ಅಧಿಸೂಚನೆ ಪ್ರಕಟಿಸಲಿದೆ. ಈಗಾಗಲೇ TET ಪಾಸಾದ ಅಭ್ಯರ್ಥಿಗಳು 1.25 ಲಕ್ಷ ಇದ್ದರೆ ಈ ವರ್ಷ ಪಾಸಾಗುವವರೂ ಸೇರಿದಂತೆ ಕನಿಷ್ಠ 1.50 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲು ಅರ್ಹರಾಗುತ್ತಾರೆ.
ಒಟ್ಟು 43,348 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1.40 ಲಕ್ಷ ಶಿಕ್ಷಕರು ಮತ್ತು 4,838 ಪ್ರೌಢಶಾಲೆಗಳಲ್ಲಿ 28 ಸಾವಿರ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 5 ಸಾವಿರ ಸೇರಿ 55 ಸಾವಿರಕ್ಕೂ ಹೆಚ್ಚಿನ ಶಿಕ್ಷಕರ ಕೊರತೆ ಇದೆ. 10 ಸಾವಿರ ಶಿಕ್ಷಕರನ್ನು ನೇಮಿಸಿದರೆ ಕೊರತೆ ಕೊಂಚ ನೀಗಲಿದೆ.

Comments

User ಜುಲೈ 10, 2024, 10:04 ಅಪರಾಹ್ನ