ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 12 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರವು ನಿರ್ಧರಿಸಿರುವುದಾಗಿ ಮಾನ್ಯ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಸರಕಾರಿ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರು ಸೇರಿದಂತೆ ಒಟ್ಟಾರೆ 12,000 ಸಾವಿರ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಇದೀಗ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯು ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ, ಅನುಮತಿ ಸಿಕ್ಕ ತಕ್ಷಣ ಅಧಿಸೂಚನೆ ಪ್ರಕಟಿಸಲಿದೆ. ಈಗಾಗಲೇ TET ಪಾಸಾದ ಅಭ್ಯರ್ಥಿಗಳು 1.25 ಲಕ್ಷ ಇದ್ದರೆ ಈ ವರ್ಷ ಪಾಸಾಗುವವರೂ ಸೇರಿದಂತೆ ಕನಿಷ್ಠ 1.50 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲು ಅರ್ಹರಾಗುತ್ತಾರೆ.
ಒಟ್ಟು 43,348 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1.40 ಲಕ್ಷ ಶಿಕ್ಷಕರು ಮತ್ತು 4,838 ಪ್ರೌಢಶಾಲೆಗಳಲ್ಲಿ 28 ಸಾವಿರ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 5 ಸಾವಿರ ಸೇರಿ 55 ಸಾವಿರಕ್ಕೂ ಹೆಚ್ಚಿನ ಶಿಕ್ಷಕರ ಕೊರತೆ ಇದೆ. 12 ಸಾವಿರ ಶಿಕ್ಷಕರನ್ನು ನೇಮಿಸಿದರೆ ಕೊರತೆ ಕೊಂಚ ನೀಗಲಿದೆ.
Comments